ಉಪ್ಪಿನಂಗಡಿ: ರಾಷ್ಟ್ರೀಯ ಐಕ್ಯತಾ ದಿನ ಮತ್ತು ರಾಷ್ಟ್ರೀಯ ಐಕ್ಯತಾ ಸಪ್ತಾಹದ ಪ್ರಯುಕ್ತ ಇಳಂತಿಲದ ಜ್ಞಾನಭಾರತಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಐಕ್ಯತಾ ಪ್ರತಿಜ್ಞೆ ಸ್ವೀಕಾರ ಕಾರ್ಯಕ್ರಮ ನಡೆಯಿತು.
ಇಳಂತಿಲದ ಜ್ಞಾನಭಾರತಿ ಕ್ಯಾಂಪಸ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಹಿಸಿ ರಾಷ್ಟ್ರೀಯ ಐಕ್ಯತೆ, ಏಕತೆ ಮತ್ತು ಸಾಮರಸ್ಯವನ್ನು ಕಾಪಾಡುವ ಪ್ರತಿಜ್ಞೆ ಸ್ವೀಕರಿಸಿದರು.
ದೇಶದ ಏಕತೆ, ಸಮಗ್ರತೆ ಮತ್ತು ಸಹೋದರತ್ವದ ಮಹತ್ವವನ್ನು ಸಾರುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.

