ಶ್ರೀ ಮಹಾವೀರ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಯಿತು.ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲೆ ಲೆಫ್ಟಿನೆಂಟ್ ವಿಜಯಲಕ್ಷ್ಮಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, “ಪ್ರಜಾಪ್ರಭುತ್ವದಲ್ಲಿ ಮತದಾನವು ಪ್ರತಿಯೊಬ್ಬ ನಾಗರಿಕನ ಹಕ್ಕು ಮಾತ್ರವಲ್ಲ, ಕರ್ತವ್ಯವೂಆಗಿದೆ.
ಯುವ ಮತದಾರರು ತಮ್ಮ ಮತದಾನದ ಹಕ್ಕನ್ನು ಸದುಪಯೋಗಪಡಿಸಿಕೊಳ್ಳಬೇಕು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು.ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಜಾಗೃತ ಮತದಾರರಾಗಿ ರೂಪುಗೊಳ್ಳಬೇಕು”ಎಂದು ವಿದ್ಯಾರ್ಥಿಗಳಿಗೆ ಮತದಾನದ ಮಹತ್ವದ ಕುರಿತು ತಿಳುವಳಿಕೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಪದವಿ ಪೂರ್ವ ವಿಭಾಗದಎನ್.ಎಸ್.ಎಸ್‌ಅಧಿಕಾರಿ ರಶ್ಮಿತಾ ಉಪಸ್ಥಿತರಿದ್ದರು.ರಾಜ್ಯಶಾಸ್ತç ವಿಭಾಗದ ಉಪನ್ಯಾಸಕಿ ಪೂರ್ಣಿಮಾ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

