ನೆಲ್ಲಿ ಶ್ರೀ ರಾಜರಾಜೇಶ್ವರೀ ಕ್ಷೇತ್ರದಲ್ಲಿ ನವರಾತ್ರಿ ಸಂಭ್ರಮ; ಅ. 20ರಂದು ಚಂಡಿಕಾಯಾಗ

0
12

ಕಾರ್ಕಳ: ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಅತ್ತೂರು ನೆಲ್ಲಿಕಟ್ಟೆಯಲ್ಲಿರುವ ಶ್ರೀ ಕ್ಷೇತ್ರ ನೆಲ್ಲಿ ಶ್ರೀ ರಾಜರಾಜೇಶ್ವರೀ ಕ್ಷೇತ್ರ ಸದ್ಗುರು ಶ್ರೀ ನಿತ್ಯಾನಂದ ಮಂದಿರದಲ್ಲಿ ನವರಾತ್ರಿ ಮಹೋತ್ಸವದ ಅಂಗವಾಗಿ ಪ್ರತಿದಿನ ರಾತ್ರಿ 7 ಗಂಟೆಯಿಂದ ಭಜನೆ, ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಅಕ್ಟೋಬರ್ 20ರಂದು ಮಂಗಳವಾರ ವಿಶೇಷವಾಗಿ ಚಂಡಿಕಾಯಾಗ, ಮಹಾಪೂಜೆ ಹಾಗೂ ಮಹಾ ಅನ್ನಸಂತರ್ಪಣೆ ನೆರವೇರಲಿದೆ.

ಶ್ರೀ ಕ್ಷೇತ್ರದಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಶ್ರೀ ದೇವಿಯ ಪ್ರಸಾದ ಸ್ವೀಕರಿಸಿ ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ಕ್ಷೇತ್ರದ ವತಿಯಿಂದ ವಿನಂತಿಸಲಾಗಿದೆ.

ನವರಾತ್ರಿ ಒಂದು ದಿನದ ಪೂಜೆಗೆ ₹5,000, ಅನ್ನಸಂತರ್ಪಣೆಗೆ ₹3,000 ಹಾಗೂ ಶ್ರೀ ದೇವಿಯ ನಿತ್ಯ ಹೂವಿನ ಅಲಂಕಾರ ಸೇವೆಗೆ ₹2,500 ಎಂದು ನಿಗದಿಪಡಿಸಲಾಗಿದೆ.