
ಮೂಡುಬಿದಿರೆ: ಪ್ರೆಸ್ ಕ್ಲಬ್ಬಿನಿಂದ ಪ್ರತ್ಯೇಕಗೊಂಡಿರುವ ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಆಯ್ಕೆಯು ಡಿ.24 ಬುಧವಾರ ಮೂಡುಬಿದಿರೆ ಪ್ರೆಸ್ ಕ್ಲಬ್ ಕಾರ್ಯಾಲಯದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ನವೀನ್ ಸಾಲ್ಯಾನ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಜೈಸನ್ ತಾಕೋಡೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಗಣೇಶ್ ಕಾಮತ್ ಎಂ. ಕಾರ್ಯದರ್ಶಿ ಶರತ್ ದೇವಾಡಿಗ, ಕೋಶಾಧಿಕಾರಿಯಾಗಿ ರಾಘವೇಂದ್ರ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಮೂಡುಬಿದಿರೆ ಪ್ರೆಸ್ ಕ್ಲಬ್ ಅಧ್ಯಕ್ಷ ಸೀತಾರಾಮ ಆಚಾರ್ಯ, ಪ್ರಸನ್ನ ಹೆಗ್ಡೆ, ಅಶ್ರಫ್ ವಾಲ್ಪಾಡಿ, ಪ್ರೇಮಶ್ರೀ ಕಲ್ಲಬೆಟ್ಟು ಹಾಗೂ ಪುನೀತ್ ಮುಂಡ್ಕೂರು ಅವರು ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರತಿನಿಧಿಗಳಾದ ರಾಜೇಶ್ ಶೆಟ್ಟಿ ಅವರು ಚುನಾವಣಾ ಅಧಿಕಾರಿಯಾಗಿ ಹಾಗೂ ಕಿರಣ್ ಸಿರ್ಸಿಕರ್ ಅವರು ಸಹಾಯಕ ಚುನಾವಣಾ ಅಧಿಕಾರಿಯಾಗಿ ಆಗಮಿಸಿ ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.
