ಮೇ ತಿಂಗಳಿನಲ್ಲಿ 5 ಕರ್ನಾಟಕ ನವೆಲ್ ಯ್ಯೂನಿಟ್ ಮಂಗಳೂರು ಇವರ ಸಹಭಾಗಿತ್ವದಲ್ಲಿ ಉಡುಪಿಯ ಎಂ.ಐ.ಟಿ ಕ್ಯಾಂಪಸ್‌ನಲ್ಲಿ ನಡೆದ ಕ್ಯಾಟ್ಸ್ ನಾವಿ ಕ್ಯಾಂಪ್ ನಲ್ಲಿ ಮೂಡುಬಿದಿರೆ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಯಶಸ್ ಜಿ ಜೂನಿಯರ್ ವಿಭಾಗದ ಬೆಸ್ಟ್ ಕೆಡೆಟ್(JD) ಹಾಗೂ ಶ್ರಾವಣಿ ಎ ಗುರುಸ್ವಾಮಿ(JW) ಸೆಕೆಂಡ್ ಬೆಸ್ಟ್ ಕೆಡೆಟ್‌ಗಳಾಗಿ ಹೊರಹೊಮ್ಮಿದ್ದಾರೆ. ಕ್ಯಾಂಪ್‌ನಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳು ಸಂಗೀತ, ಕ್ರೀಡೆ, ಪರೇಡ್ ಇತ್ಯಾದಿ ಚಟುವಟಿಕೆಗಳಲ್ಲಿ ಬಹುಮಾನ ಗಳಿಸಿಕೊಂಡು ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಯನ್ನು ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್ ಕಾರ್ಯದರ್ಶಿಗಳಾದ ರಶ್ಮಿತಾ ಜೈನ್ ಮುಖ್ಯೋಪಾಧ್ಯಾಯರಾದ ಶಿವಪ್ರಸಾದ್ ಭಟ್ ಕೇರ್‌ಟೇಕರ್ ಆಫೀಸರ್ ರೇಣುಕಾಚಾರ್ಯ ಅಭಿನಂದಿಸಿದ್ದಾರೆ.