ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದ ನೆರಿಯ ಗ್ರಾ.ಪಂ. ಸದಸ್ಯೆ ಮರಿಯಮ್ಮ ಬಿಜೆಪಿ ಪಕ್ಷಕ್ಕೆ ಮರು ಸೇರ್ಪಡೆ

0
4

ಬೆಳ್ತಂಗಡಿ : ಇತ್ತೀಚೆಗೆ ಬಿಜೆಪಿ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದ ನೆರಿಯ ಗ್ರಾಮ ಪಂಚಾಯತ್‌ನ ಬಿಜೆಪಿ ಬೆಂಬಲಿತ ಸದಸ್ಯೆ ಮರಿಯಮ್ಮ ಅವರು ಇಂದು ಶಾಸಕರಾದ ಹರೀಶ್ ಪೂಂಜ ಅವರ ಸಮ್ಮುಖದಲ್ಲಿ ಮತ್ತೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.

ಬಿಜೆಪಿ ಪಕ್ಷಕ್ಕೆ ಮರು ಸೇರ್ಪಡೆಗೊಂಡ ಮರಿಯಮ್ಮ ಅವರನ್ನು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸ್ವಾಗತಿಸಿದರು. ಈ ಮೂಲಕ ನೆರಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಬಿಜೆಪಿ ಮುಂದಾಗಿದೆ.

ಈ ಸಂದರ್ಭದಲ್ಲಿ ಬಿಜೆಪಿ ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ್, ಮಂಡಲ ಕೋಶಾಧಿಕಾರಿ ಜಯಂತ್ ಗೌಡ ಗುರಿಪಳ್ಳ, ನೆರಿಯ ಶಕ್ತಿಕೇಂದ್ರ ಅಧ್ಯಕ್ಷ ವಿಶ್ವನಾಥ್ ಹಾಗೂ ಬಿಜೆಪಿ ಮುಖಂಡರಾದ ಬಾಬು ಗೌಡ ಉಪಸ್ಥಿತರಿದ್ದರು.