“ನೆತ್ತರಕೆರೆ” ತುಳು ಸಿನಿಮಾದ ಟೀಸರ್ ಬಿಡುಗಡೆ: ಸಿನಿಮಾರಂಗದಲ್ಲಿ ಸಂಚಲನ ಮೂಡಿಸಿದ ಟೀಸರ್

0
124

ಮಂಗಳೂರು: ಅಸ್ತ್ರ ಪ್ರೊಡಕ್ಷನ್ ಲಾಂಛನದಲ್ಲಿ ಸ್ವರಾಜ್ ಶೆಟ್ಟಿ ನಿರ್ದೇಶನದಲ್ಲಿ ಲಂಚುಲಾಲ್ ಕೆ ಎಸ್ ನಿರ್ಮಾಣದಲ್ಲಿ ತಯಾರಾಗುತ್ತಿರುವ ನೆತ್ತರೆಕೆರೆ ತುಳು ಸಿನಿಮಾದ ಟೀಸರ್ ಬಿಡುಗಡೆಗೊಂಡಿದ್ದು ಸಿನಿಮಾರಂಗದಲ್ಲಿ ಹೊಸ ಸಂಚಲನವನ್ನು ಸೃಷ್ಟಿಸಿದೆ. ನೆತ್ತರಕೆರೆ ವಿಭಿನ್ನ ಬಗೆಯ ಕಮರ್ಷಿಯಲ್ ಚಿತ್ರವಾಗಿದೆ. ಪಾತ್ರಗಳು ಭಿನ್ನವಾಗಿದೆ. ಸಿನಿಮಾದ ಬಗ್ಗೆ ಪ್ರೇಕ್ಷಕರಲ್ಲಿ ಕಾತರ, ಕುತೂಹಲ ಹೆಚ್ಚಿದೆ. ಹೀಗಾಗಿ ಸಿನಿಮಾವನ್ನು ಜೂನ್ ಕೊನೆಯ ವಾರದಲ್ಲಿ ತೆರೆಕಾಣಿಸಲು ಚಿತ್ರತಂಡ ಸಿದ್ದತೆ ಮಾಡಿಕೊಂಡಿದೆ.
ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದೆ. ಸಿನಿಮಾಕ್ಕೆ ಚೇಳಾರ್, ಮುಲ್ಕಿ, ಕಿನ್ನಿಗೋಳಿಯಲ್ಲಿ ಚಿತ್ರೀಕರಣಗೊಂಡಿದೆ.
ಸ್ವರಾಜ್ ಶೆಟ್ಟಿ ಸಿನಿಮಾಕ್ಕೆ ಚಿತ್ರಕತೆ , ಸಂಭಾಷಣೆಯೊಂದಿಗೆ ನಿರ್ದೇಶನದ ಜವಾಬ್ದಾರಿಯನ್ನೂ ವಹಿಸಿಕೊಂಡಿದ್ದಾರಲ್ಲದೆ ನಾಯಕ ನಟನಾಗಿಯೂ ಅಭಿನಯಿಸಿದ್ದಾರೆ. ನಾಯಕಿಯಾಗಿ ದಿಶಾಲಿ ಪೂಜಾರಿ ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ ಸುಮನ್ ತಲ್ವಾರ್, ಲಂಚುಲಾಲ್ ಕೆ ಎಸ್ ಅಭಿನಯಿಸಿದ್ದಾರೆ.
ಸಿನಿಮಾದಲ್ಲಿ ಪೃಥ್ವಿನ್ ಪೊಳಲಿ, ಯುವ ಶೆಟ್ಟಿ, ಅನಿಲ್ ಉಪ್ಪಳ, ಪುಷ್ಪರಾಜ್ ಬೊಳ್ಳೂರು, ವಿಜಯ ಮಯ್ಯ, ನೀತ್ ಪೂಜಾರಿ, ಉತ್ಸವ ವಾಮಂಜೂರು, ಚಂದ್ರಶೇಖರ ಸಿದ್ದಕಟ್ಟೆ, ಮನೀಶ್ ಶೆಟ್ಟಿ ಉಪಿರ, ಭವ್ಯಾ ಪೂಜಾರಿ, ನಮಿತ ಕಿರಣ್, ಸುನೀತಾ, ವಿನಾಯಕ್ ಜಪ್ಪು, ಭಗವಾನ್, ಕೀರ್ತನ್ ಮುಲ್ಕಿ ಇದ್ದಾರೆ.
ಸಿನಿಮಾಕ್ಕೆ ಚಿತ್ರಕತೆ ನಿರ್ದೇಶನ ಸ್ವರಾಜ್ ಶೆಟ್ಟಿ, ಕ್ಯಾಮರಾ: ಉದಯ ಬಲ್ಲಾಳ್, ಸಂಗೀತ: ವಿನೋದ್ ರಾಜ್ ಕೋಕಿಲಾ, ಸಂಕಲನ: ಗಣೇಶ್ ನೀರ್ಚಾಲ್, ಸಾಹಸ: ಮಾಸ್ ಮಾದ, ಟೈಗರ್ ಶಿವ, ಎಕ್ಸಿಟಿವ್ ಪ್ರೊಡ್ಯುಸರ್ : ಯತೀಶ್ ಪೂಜಾರಿ, ಲೈನ್ ಪ್ರೊಡ್ಯುಸರ್: ವಿಜಯ ಮಯ್ಯ, ಪ್ರೊಡಕ್ಷನ್ ಮ್ಯಾನೇಜರ್: ರಾಜೇಶ್ ಕುಡ್ಲ, ನಿರ್ದೇಶನ ವಿಭಾಗದಲ್ಲಿ ಅವಿನಾಶ್ ಎಸ್ ನೀತ್ ಪೂಜಾರಿ, ಕಾರ್ತಿಕ್ ಜಯಚಂದ್ರನ್, ತುಳಸಿದಾಸ್ ಮಂಜೇಶ್ವರ್, ಮೇಕಪ್ : ಚೇತನ್, ಆಟ್೯: ವಿಪಿನ್,
ಸಿನಿಮಾ ತುಳುವಿನ ಜೊತೆಗೆ ಬೇರೆ ಭಾಷೆಗಳಲ್ಲೂ ಬಿಡುಗಡೆಯಾಗಲಿದ್ದು, ಇದೊಂದು ಪಾನ್ ಇಂಡಿಯಾ ಸಿನಿಮಾ ಆಗಿದೆ.

LEAVE A REPLY

Please enter your comment!
Please enter your name here