ಜಿಲ್ಲೆಯ ಸಂಸದರು ಮತ್ತು ಶಾಸಕರೊಂದಿಗೆ ಬಿಜೆಪಿ ನೂತನ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಸಮಾಲೋಚನೆ : ಜೂ.16ರಂದು ಜವಾಬ್ದಾರಿ ಸ್ವೀಕಾರ

0
168

ಬಿಜೆಪಿ ಉಡುಪಿ ನೂತನ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಜಿಲ್ಲೆಯ ಶಾಸಕರುಗಳಾದ ವಿ.ಸುನೀಲ್ ಕುಮಾರ್, ಗುರ್ಮೆ ಸುರೇಶ್ ಶೆಟ್ಟಿ, ಯಶ್ಪಾಲ್ ಎ. ಸುವರ್ಣ, ಕಿರಣ್ ಕುಮಾರ್ ಕೊಡ್ಗಿ ಮತ್ತು ಗುರುರಾಜ್ ಗಂಟಿಹೊಳೆ ಅವರೊಂದಿಗೆ ಸಮಾಲೋಚನೆ ನಡೆಸಿದರು.

ಜೂ.16ರಂದು ಬೆಳಿಗ್ಗೆ 11.30ಕ್ಕೆ ನೂತನ ಜಿಲ್ಲಾಧ್ಯಕ್ಷರ ಜವಾಬ್ದಾರಿ ಸ್ವೀಕಾರ ಕಾರ್ಯಕ್ರಮವು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಲಿದೆ. ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಉಡುಪಿ ಜಿಲ್ಲೆ ಡಾ! ವಿ.ಎಸ್. ಆಚಾರ್ಯ ಅವರ ಕಾಲದಿಂದಲೂ ರಾಜ್ಯದಲ್ಲೇ ಮುಂಚೂಣಿ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ ಪಕ್ಷವನ್ನು ಇನ್ನಷ್ಟು ಸದೃಢವಾಗಿ ಕಟ್ಟಿ ಬೆಳೆಸಲು ಎಲ್ಲರೂ ಜೊತೆಯಾಗಿ ಬದ್ಧತೆಯಿಂದ ತೊಡಗಿಸಿಕೊಳ್ಳಲು ನಿರ್ಧರಿಸಲಾಯಿತು ಎಂದು ನಿಯೋಜಿತ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here