ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಹಾಗೂ ಸಂಭವನೀಯ ನೈಸರ್ಗಿಕ ವಿಕೋಪಗಳ ಪರಿಣಾಮಕಾರಿ ನಿರ್ವಹಣೆಗೆ ಕರ್ನಾಟಕ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ವಿವಿಧ ಜಿಲ್ಲೆಗಳಿಗೆ ಉಪ ಮುಖ್ಯಮಂತ್ರಿಗಳು ಹಾಗೂ ಸಚಿವರನ್ನು ಜಿಲ್ಲಾ ಉಸ್ತುವಾರಿಗಳಾಗಿ ನೇಮಿಸಿ ಆದೇಶ ಹೊರಡಿಸಿದೆ.
ಸರ್ಕಾರದ ಆದೇಶದಂತೆ ಈ ನೇಮಕಾತಿಗಳು ತಕ್ಷಣದಿಂದಲೇ ಜಾರಿಗೆ ಬಂದಿದ್ದು, ಮುಂದಿನ ಆದೇಶದವರೆಗೆ ಜಾರಿಯಲ್ಲಿರಲಿವೆ. ನೇಮಕಗೊಂಡಿರುವ ಸಚಿವರು ತಮ್ಮಗೆ ಹಂಚಿಕೆಯಾಗಿರುವ ಜಿಲ್ಲೆಗಳಲ್ಲಿ ನೈಸರ್ಗಿಕ ವಿಕೋಪ ನಿರ್ವಹಣೆ, ಪರಿಹಾರ ಕಾರ್ಯಾಚರಣೆ ಹಾಗೂ ಪರಿಸ್ಥಿತಿ ಮೇಲ್ವಿಚಾರಣೆಯ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.
📋 ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ
🔹 ಡಾ. ಜಿ. ಪರಮೇಶ್ವರ – ತುಮಕೂರು, ಚಿತ್ರದುರ್ಗ
🔹 ಕೆ.ಹೆಚ್. ಮುನಿಯಪ್ಪ – ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ವಿಜಯನಗರ
🔹 ರಾಮಲಿಂಗಾರೆಡ್ಡಿ – ಬೆಂಗಳೂರು ದಕ್ಷಿಣ, ಮಂಡ್ಯ
🔹 ಎಂ.ಬಿ. ಪಾಟೀಲ – ವಿಜಯಪುರ, ಬಾಗಲಕೋಟೆ
🔹 ಕೆ.ಜೆ. ಜಾರ್ಜ್ – ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ
🔹 ಕೃಷ್ಣ ಬೈರೇಗೌಡ – ಬೆಂಗಳೂರು ನಗರ, ಹಾಸನ
🔹 ಈಶ್ವರ್ ಖಂಡ್ರೆ – ಬೀದರ್, ಗದಗ
🔹 ಸತೀಶ್ ಜಾರಕಿಹೊಳಿ – ಬೆಳಗಾವಿ, ಧಾರವಾಡ, ಹಾವೇರಿ
🔹 ಪ್ರಿಯಾಂಕ್ ಖರ್ಗೆ – ಕಲಬುರಗಿ, ಯಾದಗಿರಿ
🔹 ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್ – ರಾಯಚೂರು, ಕೊಪ್ಪಳ
🔹 ಯು.ಟಿ. ಖಾದರ್ ಫರೀದ್ – ಉಡುಪಿ, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ
🔹 ಭೈರತಿ ಸುರೇಶ್ – ಕೋಲಾರ, ಚಿಕ್ಕಬಳ್ಳಾಪುರ
🔹 ಡಾ. ಯತೀಂದ್ರ ಸಿದ್ದರಾಮಯ್ಯ – ಮೈಸೂರು, ಚಾಮರಾಜನಗರ
ಸರ್ಕಾರದ ಈ ಕ್ರಮದಿಂದ ಮಳೆಗಾಲದ ಸಂದರ್ಭದಲ್ಲಿ ಜಿಲ್ಲೆಗಳಲ್ಲಿನ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಲು ಹಾಗೂ ತುರ್ತು ಪರಿಸ್ಥಿತಿಗಳಿಗೆ ತಕ್ಷಣ ಸ್ಪಂದಿಸಲು ಅನುಕೂಲವಾಗಲಿದೆ ಎಂದು ಹೇಳಲಾಗಿದೆ.

