ಮಂಗಳೂರು : ಶ್ರೀ ವಿದ್ಯಾ ಗಣಪತಿ ಸೇವಾ ಟ್ರಸ್ಟ್ (ರಿ), ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆ.ರಾ.ರ.ಸಾ.ನಿ.), ಮಂಗಳೂರು ವಿಭಾಗದ ನೂತನ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಇತ್ತೀಚೆಗೆ ಆಯ್ಕೆ ಮಾಡಲಾಗಿದೆ.
ನೂತನ ಸಮಿತಿಯ ಗೌರವಾಧ್ಯಕ್ಷರಾಗಿ ರಾಜೇಶ್ ಶೆಟ್ಟಿ, ಅಧ್ಯಕ್ಷರಾಗಿ ಅಶೋಕ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ದೀಪಕ್ ನಾನಿಲ್, ಉಪಾಧ್ಯಕ್ಷರಾಗಿ ಚಂದ್ರಶೇಖರ್, ಕೋಶಾಧಿಕಾರಿಯಾಗಿ ಅಕಿಲೇಶ್ ಹಾಗೂ ಜೊತೆ ಕಾರ್ಯದರ್ಶಿಯಾಗಿ ರಮಿತ್ ಶೆಟ್ಟಿ ಆಯ್ಕೆಯಾಗಿದ್ದಾರೆ.
ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳನ್ನು ಟ್ರಸ್ಟ್‌ನ ಸದಸ್ಯರು ಹಾಗೂ ಹಿತೈಷಿಗಳು ಅಭಿನಂದಿಸಿದ್ದು, ಅವರ ನೇತೃತ್ವದಲ್ಲಿ ಟ್ರಸ್ಟ್‌ನ ಸಾಮಾಜಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಇನ್ನಷ್ಟು ಪರಿಣಾಮಕಾರಿಯಾಗಿ ಹಾಗೂ ಯಶಸ್ವಿಯಾಗಿ ಮುನ್ನಡೆಯಲಿ ಎಂದು ಶುಭ ಹಾರೈಸಿದ್ದಾರೆ.

