ಮೂಡುಬಿದಿರೆ: ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬಡಜನರಿಗೆ ಆರೋಗ್ಯ ಸೇವೆ ಪಡೆಯುವ ಸಂದರ್ಭದಲ್ಲಿ ಎದುರಾಗುತ್ತಿರುವ ತೊಂದರೆಗಳನ್ನು ಮನಗಂಡು, ಕೇಂದ್ರವನ್ನು ತಾಲೂಕು ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ಎಂ. ರೈ ಅವರು ಸಲ್ಲಿಸಿದ್ದ ಮನವಿಗೆ ಪೂರಕವಾಗಿ ಇದೀಗ ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯಿಂದ ಹೆಚ್ಚುವರಿಯಾಗಿ 50 ಹಾಸಿಗೆಗಳನ್ನು ಶಿಫಾರಸು ಮಾಡಲಾಗಿದೆ.
ಈ ಕ್ರಮಕ್ಕೆ ಸಹಕರಿಸಿದ ಕರ್ನಾಟಕ ಸರ್ಕಾರದ ಗೌರವಾನ್ವಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಮತ್ತು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರಿಗೆ ಮೂಡಬಿದಿರೆಯ ಸರ್ವ ಜನತೆಯ ಪರವಾಗಿ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಲಾಯಿತು.
ಹೆಚ್ಚುವರಿ 50 ಹಾಸಿಗೆಗಳ ವ್ಯವಸ್ಥೆಯಿಂದ ಮೂಡಬಿದಿರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಜನರಿಗೆ ಆರೋಗ್ಯ ಸೇವೆ ಇನ್ನಷ್ಟು ಸುಲಭವಾಗಿ ದೊರೆಯುವ ನಿರೀಕ್ಷೆ ಇದೆ.

