Wednesday, October 9, 2024
Homeಪುತ್ತೂರುಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೂತನ ಬಂಡಿ ರಥ: ಅದ್ದೂರಿ ಸ್ವಾಗತ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೂತನ ಬಂಡಿ ರಥ: ಅದ್ದೂರಿ ಸ್ವಾಗತ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೂತನ ಬಂಡಿ ರಥವು ಭಕ್ತಿ ಸಡಗರದ ಭವ್ಯ ಮೆರವಣಿಗೆಯೊಂದಿಗೆ ಸೋಮವಾರ ಸಂಜೆ ಕುಕ್ಕೆಗೆ ಆಗಮಿಸಿತು. ವೇ ಮೂ ಸಾಯಿ ಶ್ರೀನಿವಾಸ್ ರಾಮಲಿಂಗೇಶ್ವರ ರಾವ್ ಸೇವಾರೂಪದಲ್ಲಿ ಶ್ರೀ ದೇವರಿಗೆ ಸಮರ್ಪಿಸುವ ನೂತನ ಬಂಡಿ ರಥ ಆನೆ, ಬಿರುದಾವಳಿ, ಬ್ಯಾಂಡ್ ವಾದ್ಯಗಳ ನಿನಾದಗಳೊಂದಿಗೆ ಕ್ಷೇತ್ರಕ್ಕೆ ಬರಮಾಡಿಕೊಳ್ಳಲಾಯಿತು.

ಕಾಶಿಕಟ್ಟೆ ಮಹಾಗಣಪತಿ ಸನ್ನಿಧಾನದಲ್ಲಿ ಭಕ್ತಿಪೂರ್ವಕವಾಗಿ ರಥವನ್ನು ಸ್ವಾಗತಿಸಲಾಯಿತು. ಪುರೋಹಿತ ಪ್ರಸಾದ್ ಕಲ್ಲೂರಾಯ ನೂತನ ಬಂಡಿ ರಥಕ್ಕೆ ಪೂಜೆ ಸಲ್ಲಿಸಿದರು.

ದೇವಳದ ಆಡಳಿತಾಧಿಕಾರಿ ಜುಬಿನ್ ಮೊಹಾಪಾತ್ರ ನೂತನ ರಥಕ್ಕೆ ಪುಷ್ಪಾರ್ಚನೆ ಮಾಡಿದರು. ಅದ್ದೂರಿ ಮೆರವಣಿಗೆಯಲ್ಲಿ ಬಳಿಕ ರಥವನ್ನು ದೇವಾಲಯಕ್ಕೆ ಕರೆದೊಯ್ಯಲಾಯಿತು. ದೇವಳದ ಗೋಪುರದ ಬಳಿ ವೇದಮೂರ್ತಿ ಮಧುಸೂಧನ ಕಲ್ಲೂರಾಯ ರಥಕ್ಕೆ ಪೂಜೆ ನೆರವೇರಿಸಿದರು. ಮೆರವಣಿಗೆಯಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರು, ಮಾಜಿ ಸದಸ್ಯರುಗಳು, ದೇವಳದ ಸಿಬ್ಬಂದಿ, ಜನಪ್ರತಿನಿಧಿಗಳು, ಭಕ್ತಾದಿಗಳು, ಸಾರ್ವಜನಿಕರು ಭಾಗವಹಿಸಿದರು.

RELATED ARTICLES
- Advertisment -
Google search engine

Most Popular