ಎಲ್‌ಪಿಜಿ ಸಿಲಿಂಡರ್ ವಿತರಣೆಗೆ ಹೊಸ ನಿಯಮ?: ಪಿಎನ್‌ಜಿ ಗ್ರಾಹಕರಿಗೆ ಕೇಂದ್ರದಿಂದ ಶಾಕ್!

0
31

ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆ ಕೇಂದ್ರ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ ಎನ್ನಲಾಗಿದ್ದು, ಪಿಎನ್‌ಜಿ (PNG) ಸಂಪರ್ಕ ಹೊಂದಿರುವ ಗ್ರಾಹಕರಿಗೆ ಎಲ್‌ಪಿಜಿ (LPG) ಸಿಲಿಂಡರ್ ವಿತರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಹೊಸ ನಿಯಮ ಜಾರಿಗೆ ಬಂದಿದೆ ಎಂಬ ಮಾಹಿತಿ ಹರಿದಾಡುತ್ತಿದೆ.

‘ಸ್ಟ್ರೇಟ್ ಆಫ್ ಹಾರ್ಮುಜ್’ ಸಮುದ್ರ ಮಾರ್ಗದ ಉದ್ವಿಗ್ನ ಪರಿಸ್ಥಿತಿಯಿಂದ ಮಧ್ಯಪ್ರಾಚ್ಯ ರಾಷ್ಟ್ರಗಳಿಂದ ಭಾರತಕ್ಕೆ ಬರುತ್ತಿದ್ದ ಕಚ್ಚಾ ತೈಲ ಹಾಗೂ ಎಲ್‌ಪಿಜಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಇಂಧನ ಕೊರತೆ ತಲೆದೋರಿದೆ ಎನ್ನಲಾಗಿದೆ. ಈ ಹಿನ್ನೆಲೆ ಸರ್ಕಾರ ತುರ್ತು ಕ್ರಮವಾಗಿ ಹೊಸ ನಿಯಮ ಜಾರಿಗೆ ತಂದಿದೆ ಎಂದು ಹೇಳಲಾಗುತ್ತಿದೆ.

ಹೊಸ ಆದೇಶದ ಪ್ರಕಾರ, ಈಗಾಗಲೇ ಪೈಪ್‌ಲೈನ್ ಮೂಲಕ ನೈಸರ್ಗಿಕ ಅನಿಲ (PNG) ಸಂಪರ್ಕ ಹೊಂದಿರುವ ಮನೆಗಳಿಗೆ ಇನ್ಮುಂದೆ ಎಲ್‌ಪಿಜಿ ಸಿಲಿಂಡರ್ ವಿತರಣೆ ಮಾಡಲಾಗುವುದಿಲ್ಲ ಎಂಬ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಂದರೆ, ಒಂದೇ ಮನೆಯಲ್ಲಿ PNG ಮತ್ತು LPG ಎರಡೂ ಸಂಪರ್ಕಗಳನ್ನು ಒಟ್ಟಿಗೆ ಇಡಲು ಅವಕಾಶ ಇರುವುದಿಲ್ಲ ಎನ್ನಲಾಗಿದೆ.

ಭಾರತದ ಎಲ್‌ಪಿಜಿ ಅವಶ್ಯಕತೆಯ ಬಹುಪಾಲು ಮಧ್ಯಪ್ರಾಚ್ಯ ರಾಷ್ಟ್ರಗಳಿಂದಲೇ ಆಮದು ಆಗುವುದರಿಂದ, ಪ್ರಸ್ತುತ ಜಾಗತಿಕ ಪರಿಸ್ಥಿತಿಯ ಪರಿಣಾಮ ದೇಶದ ಇಂಧನ ಪೂರೈಕೆಯ ಮೇಲೂ ಬಿದ್ದಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಪೈಪ್‌ಲೈನ್ ಸೌಲಭ್ಯ ಇರುವ ನಗರ ಪ್ರದೇಶಗಳಲ್ಲಿ ಪರ್ಯಾಯ ವ್ಯವಸ್ಥೆ ಇರುವುದರಿಂದ, ಗ್ರಾಮೀಣ ಹಾಗೂ PNG ಸೌಲಭ್ಯ ಇಲ್ಲದ ಪ್ರದೇಶಗಳಿಗೆ ಗ್ಯಾಸ್ ಲಭ್ಯತೆ ಖಚಿತಪಡಿಸಲು ಸರ್ಕಾರ ಈ ಕ್ರಮ ಕೈಗೊಂಡಿದೆ ಎಂಬ ಚರ್ಚೆಗಳು ನಡೆಯುತ್ತಿವೆ.

ಇದರಿಂದ ದೇಶದ ಕೋಟ್ಯಂತರ ಗ್ರಾಹಕರಲ್ಲಿ ಆತಂಕ ಮತ್ತು ಗೊಂದಲ ಉಂಟಾಗಿದ್ದು, ಸರ್ಕಾರದಿಂದ ಅಧಿಕೃತ ಸ್ಪಷ್ಟನೆಗಾಗಿ ಸಾರ್ವಜನಿಕರು ಕಾಯುತ್ತಿದ್ದಾರೆ.

LEAVE A REPLY

Please enter your comment!
Please enter your name here