Friday, February 14, 2025
Homeಮಂಗಳೂರುಹೊಸ ಧಾರಾವಾಹಿ'ದೃಷ್ಟಿಬೊಟ್ಟು'

ಹೊಸ ಧಾರಾವಾಹಿ’ದೃಷ್ಟಿಬೊಟ್ಟು’

ಮಂಗಳೂರು: ಕನ್ನಡಿಗರಿಗೆ ಸದಭಿರುಚಿಯ ಮನರಂಜನೆ ನೀಡುತ್ತಾ ಬಂದಿರುವ ಕಲರ್ಸ್ ಕನ್ನಡ ವಾಹಿನಿಯು ಈಗ ಮತ್ತೊಂದು ಹೊಸ ಧಾರಾವಾಹಿಯನ್ನು ಹೊತ್ತು ತಂದಿದೆ. ರೂಪವೇ ಶಾಪವಾದ ಹುಡುಗಿಯೊಬ್ಬಳ ಕತೆಯನ್ನು ಮನಮುಟ್ಟುವಂತೆ ಹೇಳುವ ಈ ಹೊಸ ಧಾರಾವಾಹಿಯ ಹೆಸರು ‘ದೃಷ್ಟಿಬೊಟ್ಟು’. ಸೆಪ್ಟೆಂಬರ್ 9ರಿಂದ ಸೋಮವಾರದಿಂದ ಶನಿವಾರದವರೆಗೆ ಪ್ರತಿ ಸಂಜೆ ಆರೂವರೆಗೆ ಈ ಧಾರಾವಾಹಿ ಪ್ರಸಾರವಾಗಲಿದೆ. ಜನಪ್ರಿಯ ಕಿರುತೆರೆ ತಾರೆ ವಿಜಯ್ ಸೂರ್ಯ ಈ ಧಾರಾವಾಹಿಯ ಮೂಲಕ ಕಲರ್ಸ್ ಕನ್ನಡ ವಾಹಿನಿಗೆ ಮರಳಿರುವುದು ವಿಶೇಷ. ನಾಯಕಿಯ ಪಾತ್ರದಲ್ಲಿ ಅರ್ಪಿತಾ ಮೋಹಿತೆ ಎಂಬ ಹೊಸ ನಟಿ ಕಾಣಿಸಿಕೊಳ್ಳಲಿದ್ದಾರೆ. ಹಿರಿಯ ನಟಿ ಅಂಬಿಕಾ ಈ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಡುತ್ತಿದ್ದಾರೆ. ಜೊತೆಗೆ ದೀಪಶ್ರೀ, ರಾಘು ಶಿವಮೊಗ್ಗ, ಅಶೋಕ್ ಹೆಗ್ಡೆ ಸೇರಿದಂತೆ ಅನೇಕ ಕಿರಿ ಹಿರಿ ನಟನಟಿಯರು ನಿಮ್ಮ ಮನಸೂರೆಗೊಳ್ಳಲು ಕಾದಿದ್ದಾರೆ. ‘ಈ ಧಾರಾವಾಹಿಯ ಪ್ರತಿಯೊಂದು ಪಾತ್ರವೂ ವೀಕ್ಷಕರ ಮನಗೆಲ್ಲುವಂತಿದೆ’ ಎನ್ನುತ್ತಾರೆ ಕಲರ್ಸ್ ಕನ್ನಡದ ಬ್ಯುಸಿನೆಸ್ ಹೆಡ್ ಪ್ರಶಾಂತ್ ನಾಯಕ್. ಅತ್ಯಾಧುನಿಕ ಕ್ಯಾಮೆರಾಗಳನ್ನು ಬಳಸಿ ಚಿತ್ರೀಕರಣ ಮಾಡಿರುವುದು ‘ದೃಷ್ಟಿ ಬೊಟ್ಟು’ ಧಾರಾವಾಹಿಯ ಮತ್ತೊಂದು ಹೆಗ್ಗಳಿಕೆ ಎಂದು ಕಲರ್ಸ್ ಹೇಳಿದೆ.

RELATED ARTICLES
- Advertisment -
Google search engine

Most Popular