ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ

0
51


ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ ಟ್ರಸ್ಟ್‌ ಬೆಂಗಳೂರು ಇವರು ನೀಡಿದ 3 ಕೋಟಿ ರೂ. ವೆಚ್ಚದ ನೂತನ ಬೆಳ್ಳಿರಥದ ಸಮರ್ಪಣೆ ಜೂ. 21ರಂದು ದೇಗುಲದಲ್ಲಿ ನಡೆಯಿತು.
ಧಾರ್ಮಿಕ ವಿಧಿ ವಿಧಾನಗಳು ದೇಗುಲದ ಅರ್ಚಕ ರಾಮಚಂದ್ರ ಅಡಿಗ ಅವರ ನೇತೃತ್ವದಲ್ಲಿ ನಡೆಯಿತು.
ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ, ಕಾರ್ಯನಿರ್ವ ಹಣಾಧಿಕಾರಿ ಪ್ರಶಾಂತ ಕುಮಾರ್‌ ಶೆಟ್ಟಿ, ಸಮಿತಿ ಸದಸ್ಯರು ಉಪಸ್ಥಿತ ರಿದ್ದರು. ಬೆಳ್ಳಿರಥ ನಿರ್ಮಿಸಿದ ರಥಶಿಲ್ಪಿಗಳಾದ ಪ್ರಭಾಕರ ಆಚಾರ್ಯ, ಕೃಷ್ಣಯ್ಯ ಆಚಾರ್ಯ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here