ಉಡುಪಿಯಲ್ಲಿ ನವಜಾತ ಶಿಶು ಮಾರಾಟ ಪ್ರಕರಣ : ವೈದ್ಯ ಸೇರಿ ಇಬ್ಬರ ಬಂಧನ..!

0
164

ಉಡುಪಿ : ನವಜಾತ ಶಿಶುವನ್ನು ಅಕ್ರಮವಾಗಿ ಮಾರಾಟ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಉಡುಪಿಯ ಕಾಮತ್ ನರ್ಸಿಂಗ್ ಹೋಮ್‌ನಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರೊಬ್ಬರು ಸೇರಿದಂತೆ ಇಬ್ಬರನ್ನು ಉಡುಪಿ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಡಾ. ಸುರೇಂದ್ರ ಹಾಗೂ ಮಲ್ಪೆಯ ನೇಜಾರು ನಿವಾಸಿ ಪ್ರಕಾಶ್ ಎಂದು ಗುರುತಿಸಲಾಗಿದೆ.

ಮಾಹಿತಿಯ ಪ್ರಕಾರ, ಸುಬ್ರಹ್ಮಣ್ಯ ನಗರ ವ್ಯಾಪ್ತಿಯ ನವಜಾತ ಶಿಶುವೊಂದನ್ನು ಪ್ರಕಾಶ್ ಎಂಬವರಿಗೆ ಮಾರಾಟ ಮಾಡಲಾಗಿತ್ತು ಎನ್ನುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಮಹಿಳಾ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದರು.

ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿದ ಪೊಲೀಸರು, ಲಭ್ಯವಾದ ಸಾಕ್ಷ್ಯಾಧಾರಗಳ ಆಧಾರದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here