ರಸ್ತೆ ಬದಿ ಪತ್ತೆಯಾದ ನವಜಾತ ಶಿಶು ಮೃತ್ಯು

0
2


ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡೆಯಲ್ಲಿ ರಸ್ತೆ ಬದಿ ಕಾಲುದಾರಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದ್ದ ನವಜಾತ ಶಿಶು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದೆ.
ಸ್ಥಳೀಯರು ಕಾಲು ದಾರಿಯಲ್ಲಿ ತೆರಳುತ್ತಿದ್ದ ವೇಳೆ ಗಂಡು ಮಗು ಪತ್ತೆಯಾಗಿದ್ದು, ಕೂಡಲೇ ಸ್ಥಳೀಯ ಕ್ಲಿನಿಕ್‌ಗೆ ಕರೆತಂದಿದ್ದರು. ವೈದ್ಯರು ಪರೀಕ್ಷಿಸಿದಾಗ ಮಗುವಿನಲ್ಲಿ ಹೃದಯ ಬಡಿತ ಇರುವುದು ದೃಢಪಟ್ಟಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಮಗು ಮೃತಪಟ್ಟಿದೆ. ಹೆತ್ತವರು ಮಗುವನ್ನು ಎಸೆದು ಹೋಗಿದ್ದ ಕಾರಣ ಮುಖಕ್ಕೆ ತೀವ್ರಗಾಯದಿಂದ ನಿರಂತರ ರಸ್ತಸ್ರಾವ ಉಂಟಾಗಿತ್ತು. ಇದರಿಂದ ಚಿಕಿತ್ಸೆಗೆ ಸ್ಪಂದಿಸಿಲ್ಲ ಎನ್ನಲಾಗಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಗುವನ್ನು ರಸ್ತೆ ಬದಿ ಎಸೆದು ಹೋದವರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.