Saturday, February 15, 2025
Homeಬೆಂಗಳೂರುಎನ್‌ಐಎ ಕಾರ್ಯಾಚರಣೆ | ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ಶಂಕಿತ ಭಯೋತ್ಪಾದಕನ ಬಂಧನ

ಎನ್‌ಐಎ ಕಾರ್ಯಾಚರಣೆ | ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ಶಂಕಿತ ಭಯೋತ್ಪಾದಕನ ಬಂಧನ

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಶಂಕಿತ ಉಗ್ರನೊಬ್ಬನನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ಬಂಧಿಸಿದ್ದಾರೆ. ತಮಿಳುನಾಡು ಹಿಜ್‌ಬುತ್‌ ತಹ್ರೀರ್‌ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಈತನನ್ನು ಎನ್‌ಐಎ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲೇ ವಶಕ್ಕೆ ಪಡೆದಿದ್ದಾರೆ.
ಶಂಕಿತ ಭಯೋತ್ಪಾದಕ ಸೌದಿ ಏರ್‌ಲೈನ್ಸ್‌ ಮೂಲಕ ಪರಾರಿಯಾಗಲು ಯತ್ನಿಸುತ್ತಿದ್ದ. ಈ ವೇಳೆ ಅಧಿಕಾರಿಗಳು ದಾಳಿ ನಡೆಸಿ ಆತನನ್ನು ಬಂಧಿಸಿದ್ದಾರೆ. ವಲಸೆ ಅಧಿಕಾರಿಗಳು ನೀಡಿದ ಮಾಹಿತಿಯ ಆಧಾರದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಶಂಕಿತ ಭಯೊತ್ಪಾದಕ ಮತ್ತು ಆತನ ಪತ್ನಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಶಂಕಿತ ಉಗ್ರನನ್ನು ವಶಕ್ಕೆ ಪಡೆದ ಬಳಿಕ ಆತನ ಪತ್ನಿ ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ದೂರು ನೀಡಿದ್ದಾಳೆ. ತನ್ನ ಪತಿಯನ್ನು ಅಪಚರಿತರು ಬಲವಂತವಾಗಿ ಕರೆದೊಯ್ದಿದ್ದಾರೆ ಎಂದು ಪತ್ನಿ ದೂರು ನೀಡಿದ್ದಾಳೆ.

RELATED ARTICLES
- Advertisment -
Google search engine

Most Popular