ಉದ್ಯೋಗಕ್ಕೆಂದು ಯೆಮನ್ಗೆ ಹೋಗಿದ್ದ ಕೇರಳದ ನರ್ಸ್ ನಿಮಿಷಾ ಪ್ರಿಯಾ ತನ್ನ ಪಾರ್ಟನರ್ ಕೊಲೆ ಆರೋಪದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದರು. ಆದರೆ, ಭಾರತ ಹಾಗೂ ಹಲವು ಧಾರ್ಮಿಕ ಮುಖಂಡರ ಮಧ್ಯಪ್ರವೇಶದ ಬಳಿಕ ಕೊನೆಗೂ ನಿಮಿಷಾಳಿಗೆ ಗಲ್ಲು ಶಿಕ್ಷೆಯಿಂದ ಮುಕ್ತಿ ಸಿಕ್ಕಿದೆ. ಯೆಮನ್‌ನಲ್ಲಿ ಕೇರಳದ ನರ್ಸ್ ನಿಮಿಷಾ ಪ್ರಿಯಾಳಿಗೆ ವಿಧಿಸಲಾಗಿದ್ದ ಮರಣದಂಡನೆಯನ್ನು ರದ್ದುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.