ಮೂಡುಕೋಡಿಯಲ್ಲಿ ದ್ವಿತೀಯ ಪಿಯುಸಿಯಲ್ಲಿ ಗರಿಷ್ಠ ಅಂಕ ಗಳಿಸಿದ ನಿಶಿತಾ ಪೂಜಾರಿಗೆ ಸನ್ಮಾನ

0
24

ಮೂಡುಕೋಡಿ : 2025-26ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 571 ಅಂಕಗಳನ್ನು ಗಳಿಸಿ ಮೂಡುಕೋಡಿ ಗ್ರಾಮದಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿನಿ ಕುಮಾರಿ ನಿಶಿತಾ ಪೂಜಾರಿ ಅವರನ್ನು ಧನ ಸಹಾಯ ನೀಡಿ ಸನ್ಮಾನಿಸಲಾಯಿತು.

ಕೊಪ್ಪದ ಬಾಕಿಮಾರು, ಮೂಡುಕೋಡಿ ನಿವಾಸಿ ಪ್ರಶಾಂತ್ ಪೂಜಾರಿ ಅವರ ಪುತ್ರಿ ನಿಶಿತಾ ಪೂಜಾರಿ, ಪ್ರಸ್ತುತ ಮಂಗಳೂರಿನ ಸ್ವಸ್ತಿಕ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದಾರೆ.

ವಿದ್ಯಾರ್ಥಿನಿಯ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಧಾರ್ಮಿಕ ಮುಖಂಡರಾದ ಕಿರಣ್ ಚಂದ್ರ ಡಿ. ಪುಷ್ಪಗಿರಿ ಅವರು ನಿಶಿತಾ ಪೂಜಾರಿ ಅವರನ್ನು ಸನ್ಮಾನಿಸಿ, ಮುಂದಿನ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹವಾಗಿ ಧನ ಸಹಾಯ ನೀಡಿದರು.

ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಇಂತಹ ಕಾರ್ಯಕ್ರಮಗಳು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಮತ್ತಷ್ಟು ಸಾಧನೆ ಮಾಡಲು ಉತ್ತೇಜನ ನೀಡುತ್ತವೆ. ನಿಶಿತಾ ಅವರ ಸಾಧನೆಗೆ ಕುಟುಂಬಸ್ಥರು, ಹಿತೈಷಿಗಳು ಹಾಗೂ ಸ್ಥಳೀಯರು ಅಭಿನಂದನೆ ಸಲ್ಲಿಸಿದ್ದಾರೆ.