ಅಮೃತ ಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹೆಬ್ರಿಯ ನಿತೀಶ್ ಕುಮಾರ್ ಇವರು ಆಂಧ್ರಪ್ರದೇಶ ವಿಜಯವಾಡದಲ್ಲಿ ನಡೆದ ವಿದ್ಯಾಭಾರತಿ ಕ್ಷೇತ್ರ ಮಟ್ಟದ ವಾಲಿಬಾಲ್ ಪಂದ್ಯಕೂಟದಲ್ಲಿ ಭಾಗವಹಿಸಿ ಬಂಗಾರದ ಪದಕ ಗೆದ್ದುಕೊಂಡರು.ಮುಂದಿನ ತಿಂಗಳು ಪುತ್ತೂರಿನ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯುವ ವಿದ್ಯಾಭಾರತಿ ನಡೆಸುವ ರಾಷ್ಟ್ರಮಟ್ಟದ ಪಂದ್ಯಕೂಟದ ವಾಲಿಬಾಲ್ ತಂಡಕ್ಕೆ ನಮ್ಮ ಸಂಸ್ಥೆಯಿಂದ ನಿತೀಶ್ ಕುಮಾರ್ ಆಯ್ಕೆಯಾಗಿರುತ್ತಾರೆ.ಇವರಿಗೆ ಅಮೃತ ಭಾರತಿ ಟ್ರಸ್ಟ್ , ಬೋಧಕ ಬೋಧಕೇತರ ವರ್ಗ ಅಭಿನಂದನೆ ಸಲ್ಲಿಸಿದೆ.ಅಮೃತ ಭಾರತಿ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ನಿಶಾನ್ ಶೆಟ್ಟಿ ತರಬೇತಿ ನೀಡಿದ್ದರು.
ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್ ರಾಷ್ಟ್ರಮಟ್ಟದ ಪಂದ್ಯಕೂಟಕ್ಕೆ ಆಯ್ಕೆಯಾದ ಅಮೃತ ಭಾರತಿ ಹೈಸ್ಕೂಲಿನ ನಿತೀಶ್ ಕುಮಾರ್
RELATED ARTICLES