ಕಡಬ : ತಾಲೂಕಿನ ಕುಟ್ರುಪಾಡಿ ನಿವಾಸಿ ಸತ್ಯಶೀಲನ್ (ಆನಂದ) ಹಾಗೂ ಮಹೇಶ್ವರಿ ದಂಪತಿಯ ಪುತ್ರ ನಿತೀಶ್ ಅವರು ಕರ್ನಾಟಕ ರಾಜ್ಯದ ಬಯೋಮೆಡಿಕಲ್ ಎಂಜಿನಿಯರಿಂಗ್ ಪದವಿ ಕೋರ್ಸ್‌ನಲ್ಲಿ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.
ನಿತೀಶ್ ಅವರು ತಮ್ಮ ಶೈಕ್ಷಣಿಕ ಸಾಧನೆಗಾಗಿ ಗೌರವಾನ್ವಿತ ರಾಜ್ಯಪಾಲರಿಂದ ಪದವಿ ಪ್ರಮಾಣಪತ್ರ ಸ್ವೀಕರಿಸಿದ್ದಾರೆ. ಅವರ ಈ ಸಾಧನೆ ಕುಟುಂಬಸ್ಥರು ಮಾತ್ರವಲ್ಲದೆ ಕುಟ್ರುಪಾಡಿ ಹಾಗೂ ಕಡಬ ತಾಲೂಕಿನ ಜನರಿಗೆ ಹೆಮ್ಮೆಯ ವಿಷಯವಾಗಿದೆ.
ನಿತೀಶ್ ಅವರ ಸಾಧನೆಯನ್ನು ಗುರುತಿಸಿದ ತಮಿಳು ಸಂಸ್ಕೃತಿ ಮತ್ತು ಶಿಕ್ಷಣ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಪೆರುಮಾಳ್ ಹಾಗೂ ಟ್ರಸ್ಟ್‌ನ ಸದಸ್ಯರು ಅವರ ಮನೆಗೆ ಭೇಟಿ ನೀಡಿ ಸನ್ಮಾನಿಸಿ, ಅಭಿನಂದಿಸಿದರು.
ಕಠಿಣ ಪರಿಶ್ರಮ ಹಾಗೂ ಶೈಕ್ಷಣಿಕ ಬದ್ಧತೆಯಿಂದ ರಾಜ್ಯಮಟ್ಟದಲ್ಲಿ ಉತ್ತಮ ಸಾಧನೆ ಮಾಡಿರುವ ನಿತೀಶ್ ಅವರಿಗೆ ಕುಟುಂಬಸ್ಥರು, ಸ್ನೇಹಿತರು ಹಾಗೂ ಸ್ಥಳೀಯರು ಅಭಿನಂದನೆ ಸಲ್ಲಿಸಿದ್ದು, ಅವರ ಮುಂದಿನ ಉನ್ನತ ಶಿಕ್ಷಣ ಹಾಗೂ ಭವಿಷ್ಯದ ಬದುಕಿಗೆ ಶುಭ ಹಾರೈಸಿದ್ದಾರೆ.

