ಉಡುಪಿ: ಇಂದ್ರಾಳಿ ರೈಲ್ವೆ ನಿಲ್ದಾಣದ ಆಟೋ ನಿಲ್ದಾಣದ ಬಳಿ ಎರಡು ಬೈಕುಗಳ ನಡುವೆ ಅಪಘಾತ ಸಂಭವಿಸಿರುವ ಘಟನೆ ಶುಕ್ರವಾರ ನಡೆದಿದೆ.
ಉಡುಪಿಯ ಇಂದ್ರಾಳಿ ರೈಲ್ವೆ ನಿಲ್ದಾಣಕ್ಕೆ ತೆರಳುವ ಮಾರ್ಗದಲ್ಲಿರುವ ಆಟೋ ನಿಲ್ದಾಣದ ಸಮೀಪ ಬೈಕ್ ಅಪಘಾತಗೊಂಡಿದೆ. ಗಾಯಾಳುವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡುವರು ಆಸ್ಪತ್ರೆಗೆ ದಾಖಲುಪಡಿಸಿದ್ದಾರೆ.

ಅಪಘಾತದಲ್ಲಿ ಓರ್ವ ಬೈಕ್ ಸವಾರನ ಕಾಲಿಗೆ ಮುರಿತವಾಗಿದ್ದು, ಮತ್ತೋರ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಗಾಯಾಳುವನ್ನು ಬಾಲಕೃಷ್ಣ ಶೆಟ್ಟಿ (70) ಎಂದು ಗುರುತಿಸಲಾಗಿದೆ.
ಅಪಘಾತದ ಸಂದರ್ಭದಲ್ಲಿ ಇಂದ್ರಾಳಿ ರೈಲ್ವೆ ಆಟೋ ನಿಲ್ದಾಣದ ಚಾಲಕರು ಗಾಯಾಳುಗಳಿಗೆ ನೆರವು ನೀಡಿದ್ದು, ಮಾನವೀಯತೆ ಮೆರೆದಿದ್ದಾರೆ.

