ಬೆಂಗಳೂರು : ಇ-ಕೆವೈಸಿ ಪೂರ್ಣಗೊಳಿಸಲು ಫಲಾನುಭವಿಗಳಿಗೆ ಎರಡು ವಿಧಾನಗಳಲ್ಲಿ ಅವಕಾಶ ಕಲ್ಪಿಸಲಾಗಿದೆ. ಅನ್ನಸೇವೆ ಆ್ಯಪ್ ಮೂಲಕ ಮನೆಯಲ್ಲೇ ಕುಳಿತು ಮೊಬೈಲ್‌ನಲ್ಲಿ ಪ್ರಕ್ರಿಯೆ ಪೂರ್ಣಗೊಳಿಸಬಹುದು. ಇಲ್ಲವೇ ಸಮೀಪದ ನ್ಯಾಯಬೆಲೆ ಅಂಗಡಿಗೆ ತೆರಳಿ ಇ-ಕೆವೈಸಿ ಮಾಡಿಸಿಕೊಳ್ಳಬಹುದು.
31 ಜಿಲ್ಲೆಗಳಲ್ಲೂ ಅನ್ನಸೇವೆ ಆ್ಯಪ್ ಸೌಲಭ್ಯ
ಪಡಿತರ ಅಂಗಡಿಗಳ ಮುಂದೆ ಸರದಿಯಲ್ಲಿ ನಿಲ್ಲುವ ತೊಂದರೆ ತಪ್ಪಿಸಲು ಆಹಾರ ಇಲಾಖೆ ಅನ್ನಸೇವೆ ಆ್ಯಪ್ ಸೌಲಭ್ಯವನ್ನು ರಾಜ್ಯದ ಎಲ್ಲ 31 ಜಿಲ್ಲೆಗಳಿಗೂ ವಿಸ್ತರಿಸಿದೆ. ಕೇಂದ್ರ ಸರ್ಕಾರದ ನಿಯಮದಂತೆ ಪ್ರತಿ ಐದು ವರ್ಷಕ್ಕೊಮ್ಮೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ.
ಹಿರಿಯ ನಾಗರಿಕರು ಹಾಗೂ ಮಕ್ಕಳ ಅನುಕೂಲಕ್ಕಾಗಿ ಮುಖ ಗುರುತಿಸುವಿಕೆ (Face Authentication) ಸೌಲಭ್ಯವನ್ನೂ ಕಲ್ಪಿಸಲಾಗಿದೆ. ಉದ್ಯೋಗಕ್ಕಾಗಿ ಬೇರೆ ನಗರಗಳಿಗೆ ವಲಸೆ ಹೋದವರು ಇ-ಕೆವೈಸಿಗಾಗಿ ಸ್ವಂತ ಊರಿಗೆ ತೆರಳುವ ಅಗತ್ಯವಿಲ್ಲದೆ ಮೊಬೈಲ್ ಮೂಲಕವೇ ಪ್ರಕ್ರಿಯೆ ಪೂರ್ಣಗೊಳಿಸಬಹುದು.
ಮೊಬೈಲ್‌ನಲ್ಲೇ ಇ-ಕೆವೈಸಿ ಮಾಡುವುದು ಹೇಗೆ?
ಅನ್ನಸೇವೆ ಆ್ಯಪ್ ಬಳಸಿ ಮನೆಯಲ್ಲೇ ಕುಳಿತು ಇ-ಕೆವೈಸಿ ಪೂರ್ಣಗೊಳಿಸಬಹುದು. ಇದಕ್ಕೆ ಪಡಿತರ ಚೀಟಿ ಹಾಗೂ ಅದಕ್ಕೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ಅಗತ್ಯವಿದೆ.
ಇ-ಕೆವೈಸಿ ಪ್ರಕ್ರಿಯೆಯ ಹಂತಗಳು:
- ಮೊಬೈಲ್‌ನಲ್ಲಿ ಅನ್ನಸೇವೆ ಆ್ಯಪ್ ತೆರೆಯಿರಿ.
- ಲಾಗಿನ್ ಪ್ರಕಾರದಲ್ಲಿ ‘ಸ್ವಯಂ/ನಾಗರಿಕ’ ಆಯ್ಕೆಮಾಡಿ.
- ನಿಮ್ಮ ಜಿಲ್ಲೆಯನ್ನು ಆಯ್ಕೆಮಾಡಿ.
- ಪಡಿತರ ಚೀಟಿ ಸಂಖ್ಯೆಯನ್ನು ನಮೂದಿಸಿ.
- ರೇಷನ್ ಕಾರ್ಡ್‌ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಗೆ ಬರುವ ಒಟಿಪಿ ನಮೂದಿಸಿ.
- ಕುಟುಂಬದ ಸದಸ್ಯರ ವಿವರಗಳಲ್ಲಿ ಇ-ಕೆವೈಸಿ ಮಾಡಿಸಬೇಕಾದ ಸದಸ್ಯರನ್ನು ಆಯ್ಕೆಮಾಡಿ.
- ಆ್ಯಪ್ ಸೂಚನೆಯಂತೆ ಮುಖ ಗುರುತಿಸುವಿಕೆ ಪ್ರಕ್ರಿಯೆ ಪೂರ್ಣಗೊಳಿಸಿ.
- ‘ಇ-ಕೆವೈಸಿ ಯಶಸ್ವಿ’ ಎಂಬ ಸಂದೇಶ ಬಂದರೆ ಪ್ರಕ್ರಿಯೆ ಪೂರ್ಣಗೊಂಡಿದೆ.
ನವೆಂಬರ್ 30 ಕೊನೆಯ ದಿನ
ಪಡಿತರ ಚೀಟಿದಾರರು ಕೊನೆಯ ದಿನದವರೆಗೆ ಕಾಯದೆ ನಿಗದಿತ ಅವಧಿಯೊಳಗೆ ಇ-ಕೆವೈಸಿ ಪೂರ್ಣಗೊಳಿಸುವಂತೆ ಆಹಾರ ಇಲಾಖೆ ಮನವಿ ಮಾಡಿದೆ. ಆಹಾರ ಸಚಿವ ರಿಜ್ವಾನ್ ಅರ್ಷದ್ ಅವರು ಈ ಹಿಂದೆ ಅನ್ನಸೇವೆ ಆ್ಯಪ್ ಮೂಲಕ ಇ-ಕೆವೈಸಿ ಮಾಡುವ ವಿಧಾನದ ವಿಡಿಯೋವನ್ನೂ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು.

