ಕಾಂಗ್ರೆಸ್ ನ ಯಾವುದೇ ಅಪಪ್ರಚಾರ ಯಶಸ್ಸುಗೊಳ್ಳಲು ಸಾದ್ಯವಿಲ್ಲ : ಬಿಜೆಪಿ ರಾಜ್ಯ ವಕ್ತಾರ ಕೆ.ಎಸ್ ನವೀನ್ ಹೇಳಿಕೆ

0
14

ಉಡುಪಿ : ಕಾಂಗ್ರೆಸ್ ಹಾಗೂ ರಾಹುಲ್ ಗಾಂಧಿ ದೇಶದಲ್ಲಿ ಅರಾಜಕತೆ ಸೃಷ್ಟಿಸಿ ಕೇಂದ್ರ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಆದರೆ ಕಾಂಗ್ರೆಸ್‌ನ ಯಾವುದೇ ಅಪಪ್ರಚಾರಗಳಿಗೆ ಜನರು ಕಿವಿಗೊಡುವುದಿಲ್ಲ. ಅವರ ಯಾವುದೇ ಯೋಜನೆಗಳು ಯಶಸ್ವಿಯಾಗಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯ ವಕ್ತಾರ ಕೆ.ಎಸ್. ನವೀನ್ ಹೇಳಿದರು.

ಉಡುಪಿ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ನಡೆಸುವ ಮೂಲಕ ದೇಶದಲ್ಲಿ ಗೊಂದಲ ಮತ್ತು ಅರಾಜಕತೆ ಸೃಷ್ಟಿಸಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.

ಬ್ಯಾಲೆಟ್ ಪೇಪರ್ ಮೂಲಕ ನಡೆದ ಚುನಾವಣೆಯಲ್ಲಿ ರಾಜ್ಯದ ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಜಯಗಳಿಸಿದ್ದು, ಕಾಂಗ್ರೆಸ್ ಶೂನ್ಯ ಸಾಧನೆ ಮಾಡಿದೆ ಎಂದು ಅವರು ತಿಳಿಸಿದರು. ಬ್ಯಾಲೆಟ್ ಪೇಪರ್ ಆಗಿರಲಿ ಅಥವಾ ಯಾವುದೇ ರೀತಿಯ ಚುನಾವಣಾ ಪ್ರಕ್ರಿಯೆಯಾಗಿರಲಿ, ಕಾಂಗ್ರೆಸ್ ನಡೆಸುವ ಅಪಪ್ರಚಾರಗಳಿಗೆ ಜನರು ಮನ್ನಣೆ ನೀಡುವುದಿಲ್ಲ. ದೇಶವನ್ನು ಅರಾಜಕತೆಗೆ ತಳ್ಳುವ ಪ್ರಯತ್ನಗಳು ಫಲ ನೀಡುವುದಿಲ್ಲ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಶಾಸಕ ಯಶಪಾಲ್ ಸುವರ್ಣ, ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.