ನ.19 : ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಉಡುಪಿಗೆ.

0
43

ಪ್ರಧಾನಿ ನರೇಂದ್ರ ಮೋದಿ ಅವರ ‘ಉಡುಪಿ ಶ್ರೀ ಕೃಷ್ಣ ಮಠ ಬೇಟಿ’ ಮತ್ತು ‘ರೋಡ್ ಶೋ’ ಕಾರ್ಯಕ್ರಮದ ‘ಪೂರ್ವ ಸಿದ್ದತಾ ಸಭೆ’ ಹಾಗೂ ‘ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಪದ ಪ್ರದಾನ’ ಸಮಾರಂಭ.

ಪ್ರಧಾನಿ ನರೇಂದ್ರ ಮೋದಿ ಅವರ ನ.28ರ ‘ಉಡುಪಿ ಶ್ರೀ ಕೃಷ್ಣ ಮಠ ಬೇಟಿ’ ಮತ್ತು ‘ರೋಡ್ ಶೋ’ ಕಾರ್ಯಕ್ರಮದ ‘ಪೂರ್ವ ಸಿದ್ದತಾ ಸಭೆ’ ಹಾಗೂ ‘ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭ’ವು ನ.19 ಬುಧವಾರ ಮಧ್ಯಾಹ್ನ ಗಂಟೆ 2.30ಕ್ಕೆ ಉಡುಪಿಯ ಹೋಟೆಲ್ ಶಾರದಾ ಇಂಟರ್ ನ್ಯಾಷನಲ್ ಸಭಾಂಗಣದಲ್ಲಿ ನಡೆಯಲಿದೆ.

ಸಮಾರಂಭದ ಉದ್ಘಾಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ನೆರವೇರಿಸಲಿದ್ದು, ಸಭೆಯ ಅಧ್ಯಕ್ಷತೆಯನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರು ವಹಿಸಲಿದ್ದಾರೆ. ಸಭೆಯಲ್ಲಿ ಸಂಸದರು, ಶಾಸಕರು, ರಾಜ್ಯ ಪದಾಧಿಕಾರಿಗಳು, ಪಕ್ಷದ ಪ್ರಮುಖರು ಮತ್ತು ಅಪೇಕ್ಷಿತ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here