ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ಡಾ.ಇಂದಿರಾ ಹೆಗ್ಗಡೆ ಅವರು ಕ್ಷೇತ್ರ ಕಾರ್ಯಗಳ ಬಗ್ಗೆ ಬರೆದಿರುವ ‘ಬಾರಗೆರೆ ಬರಂಬು ತುಳುವೆರೆ ಪುಂಚ ನಾಡೊಂದು’ ಕೃತಿ ಬಿಡುಗಡೆ ಕಾರ್ಯಕ್ರಮ ನ. 5 ರ ಮಧ್ಯಾಹ್ನ 3.00 ಗಂಟೆಗೆ ಮಂಗಳೂರಿನ ತುಳು ಭವನದಲ್ಲಿ ನಡೆಯಲಿದೆ.
‘ಬಾರಗೆರೆ ಬರಂಬು ತುಳುವೆರೆ ಪುಂಚ ನಾಡೊಂದು’ ಕೃತಿಯನ್ನು ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ.ಆಶಾಲತ ಸುವರ್ಣ ಅವರು ಬಿಡುಗಡೆ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ವಹಿಸಲಿದ್ದಾರೆ. ವೈದ್ಯ ಡಾ. ಸಮೀರ್ ಮಾಡ, ಹಿರಿಯ ಲೇಖಕಿ ಪ್ರೇಮ ಅರ್ಜಿ ಕಾರ್ಕಳ, ಚೇಳೖರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜ್ಯೋತಿ ಚೇಳೖರು, ಎಸ್. ಆರ್. ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿ ಕೃಷ್ಣಮೂರ್ತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುವರು ಎಂದು ತುಳು ಅಕಾಡೆಮಿ ಪ್ರಕಟಣೆ ತಿಳಿಸಿದೆ.

