ದರ್ಶನ್ ಪತ್ನಿ ವಿರುದ್ಧ ಅಶ್ಲೀಲ ಪೋಸ್ಟ್: ಸೈಬರ್ ಪೊಲೀಸರ ಮೊರೆ ಹೋದ ವಿಜಯಲಕ್ಷ್ಮಿ..!

0
20

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ನಟ ದರ್ಶನ್‌ ತೂಗುದೀಪ್ ಜೈಲಿನಲ್ಲಿರುವ ನಡುವೆಯೇ, ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್‌ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಅಶ್ಲೀಲ ಪೋಸ್ಟ್‌ಗಳನ್ನು ಹಂಚಿಕೊಳ್ಳಲಾಗಿದೆ ಎಂಬ ಆರೋಪ ಕೇಳಿಬಂದಿದೆ.

‘ಜಲಗಾರ ಯೂನಿವರ್ಸಿಟಿ’ ಎಂಬ ಹೆಸರಿನ ನಕಲಿ ಖಾತೆಯೊಂದರಿಂದ ವಿಜಯಲಕ್ಷ್ಮಿ ಅವರ ವೈಯಕ್ತಿಕ ಬದುಕಿನ ಕುರಿತು ಸುಳ್ಳು ಹಾಗೂ ಮಾನಹಾನಿಕರ ಮಾಹಿತಿಯನ್ನು ಪ್ರಸಾರ ಮಾಡಲಾಗಿದೆ ಎನ್ನಲಾಗಿದೆ. ವಿಶೇಷವಾಗಿ ನಟ ದನ್ವೀರ್‌ ಗೌಡ ಜತೆ ವಿಜಯಲಕ್ಷ್ಮಿ ಅವರಿಗೆ ಸಂಬಂಧ ಇದೆ ಎಂದು ಆರೋಪಿಸಿ ವಿಡಿಯೊ ಹಾಗೂ ಪೋಸ್ಟ್‌ಗಳನ್ನು ಹಂಚಿಕೊಳ್ಳಲಾಗಿದೆ.

ಈ ಪೋಸ್ಟ್‌ಗಳಲ್ಲಿ ವಿಜಯಲಕ್ಷ್ಮಿ, ಅವರ ಪುತ್ರ ಹಾಗೂ ಕುಟುಂಬದ ಬಗ್ಗೆ ಅಸಭ್ಯ ಮತ್ತು ಅವಹೇಳನಕಾರಿ ಪದಗಳನ್ನು ಬಳಸಲಾಗಿದೆ ಎಂದು ತಿಳಿದುಬಂದಿದ್ದು, ಇದರಿಂದ ಬೇಸತ್ತ ವಿಜಯಲಕ್ಷ್ಮಿ ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ.

ಮತ್ತೊಂದೆಡೆ, ದರ್ಶನ್ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಪರವಾಗಿ ಪ್ರಾರ್ಥನೆ ಹಾಗೂ ಬೆಂಬಲ ವ್ಯಕ್ತಪಡಿಸುತ್ತಿರುವ ಸಂದರ್ಭದಲ್ಲಿ, ವಿಜಯಲಕ್ಷ್ಮಿ ಕೂಡ ಪತಿಯ ಪರ ಹೋರಾಟ ಮುಂದುವರಿಸಿದ್ದಾರೆ. ಅವರ ಈ ನಿಲುವಿಗೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದ್ದರೆ, ವಿರೋಧಿಗಳಿಂದ ಟ್ರೋಲ್‌ಗಳು ಕೂಡ ಹೆಚ್ಚಾಗುತ್ತಿರುವುದು ಗಮನಾರ್ಹವಾಗಿದೆ.

ಸದ್ಯ ವಿಜಯಲಕ್ಷ್ಮಿ ನೀಡಿರುವ ದೂರಿನ ಆಧಾರದ ಮೇಲೆ ನಕಲಿ ಖಾತೆ ನಿರ್ವಹಿಸುತ್ತಿರುವ ವ್ಯಕ್ತಿಯ ವಿರುದ್ಧ ಸೈಬರ್ ಪೊಲೀಸರು ತನಿಖೆ ಆರಂಭಿಸುವ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here