ಅ. 11:ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ನರೇಂದ್ರ ಮೋದಿ ಹುಟ್ಟು ಹಬ್ಬದ ಅಂಗವಾಗಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ ಮತ್ತು ಸಂವಾದ ಕಾರ್ಯಕ್ರಮ: ಯಶ್ ಪಾಲ್ ಸುವರ್ಣ

0
39

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಹಾಗೂ ಸಂವಾದ ಕಾರ್ಯಕ್ರಮವನ್ನು ಅಕ್ಟೋಬರ್ 11 ರಂದು ಉಡುಪಿಯ ಶ್ಯಾಮಿಲಿ ಸಭಾಂಗಣದಲ್ಲಿ ಆಯೋಜಿಸಿರುವುದಾಗಿ ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.

ದೇಶ ಕಂಡ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಭವಿಷ್ಯದ ಆತ್ಮನಿರ್ಭರ ಭಾರತ ನಿರ್ಮಾಣದ ರೂವಾರಿಗಳಾದ ವಿದ್ಯಾರ್ಥಿಗಳ ದೃಷ್ಟಿಯಲ್ಲಿ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವ, ಕಾರ್ಯ ಯೋಜನೆ , ಬದ್ಧತೆ ಹಾಗೂ ವಿಕಸಿತ ಭಾರತ ಕಲ್ಪನೆಯ ಬಗ್ಗೆ “ನಾ ಕಂಡಂತೆ ಪ್ರಧಾನಿ ನರೇಂದ್ರ ಮೋದಿ” “Modi in My Eyes : a Visionary” ಎಂಬ ವಿಷಯದ ಬಗ್ಗೆ ಪ್ರಬಂಧ ಸ್ಪರ್ಧೆಯನ್ನು ವಿದ್ಯಾರ್ಥಿಗಳಿಗೆ ಆಯೋಜನೆ ಮಾಡಲಾಗಿದೆ.

ಪ್ರಬಂಧ ಸ್ಪರ್ಧೆ 1-5 ತರಗತಿ ವಿಭಾಗ, ಪ್ರಾಥಮಿಕ ವಿಭಾಗ (6-7 ತರಗತಿ), ಪ್ರೌಢಶಾಲಾ ವಿಭಾಗ ( 8-10), ಪಿಯುಸಿ ವಿಭಾಗ, ಪದವಿ ವಿಭಾಗ, ಹಾಗೂ ಸ್ನಾತಕೋತ್ತರ ವಿಭಾಗದಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಆಕರ್ಷಕ ಬಹುಮಾನದೊಂದಿಗೆ, ಪ್ರಧಾನಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡುವ ಅವಕಾಶವನ್ನು ವಿಜೇತರಿಗೆ ಬ್ಯಾಂಕಿನ ವತಿಯಿಂದ ಕಲ್ಪಿಸಲಾಗುವುದು.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9972120332 ಸಂಪರ್ಕಿಸ ಬಹುದು ಹಾಗೂ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿನ ವೆಬ್ ಸೈಟ್ www.mahalakshmicoopbank.com ನಲ್ಲಿ ಆಸಕ್ತ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here