ಅ.16 : ‘ಜಿಎಸ್ಟಿ ಸುಧಾರಣೆಗಳು’ ವಿಚಾರ ಸಂಕಿರಣ

0
14

ಬಿಜೆಪಿ ಉಡುಪಿ ಜಿಲ್ಲೆ, ಜಿಲ್ಲಾ ಆರ್ಥಿಕ ಪ್ರಕೋಷ್ಠ ಹಾಗೂ ಬಿಜೆಪಿ ಉಡುಪಿ ವಿಧಾನಸಭಾ ಕ್ಷೇತ್ರದ ಸಹಯೋಗದೊಂದಿಗೆ ‘ಮುಂದಿನ ಪೀಳಿಗೆಯ ಜಿಎಸ್ಟಿ 2.0’ (ಜಿಎಸ್ಟಿ ಸುಧಾರಣೆಗಳು ಮತ್ತು ಗ್ರಾಹಕರಿಗೆ ಲಾಭಗಳು) ವಿಷಯದಲ್ಲಿ ವಿಚಾರ ಸಂಕಿರಣವು ಅ.16, ಗುರುವಾರ ಬೆಳಿಗ್ಗೆ ಗಂಟೆ 10.00ಕ್ಕೆ ಉಡುಪಿ ಅಜ್ಜರಕಾಡು ಹೋಟೆಲ್ ಡಯಾನ ಸಭಾಂಗಣದಲ್ಲಿ ನಡೆಯಲಿದೆ.

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯುವ ವಿಚಾರ ಸಂಕಿರಣವನ್ನು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ಪಾಲ್ ಎ. ಸುವರ್ಣ ಅವರು ಭಾಗವಹಿಸಲಿದ್ದಾರೆ.

ಬೆಂಗಳೂರಿನ ಖ್ಯಾತ ಅರ್ಥ ಶಾಸ್ತ್ರಜ್ಞ ವಿಶ್ವನಾಥ ಭಟ್ ಅವರು ವಿಚಾರ ಸಂಕಿರಣವನ್ನು ನಡೆಸಿಕೊಡಲಿದ್ದಾರೆ. ಪಕ್ಷದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಆಸಕ್ತ ಸಾರ್ವಜನಿಕ ಬಂಧುಗಳು ಭಾಗವಹಿಸಿ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಬಿಜೆಪಿ ಜಿಲ್ಲಾ ವಕ್ತಾರ ಹಾಗೂ ಜಿಲ್ಲಾ ಆರ್ಥಿಕ ಪ್ರಕೋಷ್ಠದ ಸಂಚಾಲಕ ದಿವಾಕರ ಶೆಟ್ಟಿ ಕೆ., ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಉಡುಪಿ ಗ್ರಾಮಾಂತರ ಅಧ್ಯಕ್ಷ ರಾಜೀವ್ ಕುಲಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here