ನ. 28 ಉಡುಪಿ ಕೃಷ್ಣ ಮಠಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಪೂರ್ವಭಾವಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

0
99

ಉಡುಪಿ ಪರ್ಯಾಯ ಪುತ್ತಿಗೆ ಮಠದ ಶ್ರೀ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ನವೆಂಬರ್ 28 ರಂದು ನಡೆಯುವ “ಲಕ್ಷ ಕಂಠ ಗೀತಾ ಪಾರಾಯಣ – ಬ್ರಹತ್ ಗೀತೋತ್ಸವ” ಕಾರ್ಯಕ್ರಮದಲ್ಲಿ ದೇಶದ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದು ಇದರ ಪೂರ್ವಭಾವಿಯಾಗಿ ಇಂದು ದಿನಾಂಕ 08-11-2025 ರಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ನಡೆದ ಇಲಾಖಾಧಿಕಾರಿಗಳ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.

ಸಭೆಯಲ್ಲಿ ಸುಸಜ್ಜಿತ ಪಾರ್ಕಿಂಗ್ ವ್ಯವಸ್ಥೆ ಜೊತೆಗೆ ಪ್ರಯಾಣಿಕರಿಗೆ ಬದಲಿ ಮಾರ್ಗ ಅನುಸರಿಸುವ ಬಗ್ಗೆ ಹಾಗೂ ಜನ ದಟ್ಟಣೆ ನಿಯಂತ್ರಿಸಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿ ಸುನಿಲ್ ಕುಮಾರ್, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ, ಬಿಜೆಪಿ ಜಿಲ್ಲಾಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ, ಜಿಲ್ಲಾಧಿಕಾರಿಗಳಾದ ಸ್ವರೂಪ ಟಿ.ಕೆ, ಪೋಲಿಸ್ ವರಿಷ್ಠಾಧಿಕಾರಿಗಳಾದ ಹರಿರಾಮ್ ಶಂಕರ್, ಅಪರ ಜಿಲ್ಲಾಧಿಕಾರಿಗಳಾದ ಅಬಿದ್ ಗಡ್ಯಾಲ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here