ದಾವಣಗೆರೆ-ನವಂಬರ್,
ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಮತ್ತು ಬೀದರ್‌ನ ಕನ್ನಡ ಸೇನೆ ಹಾಗೂ ವಿಶ್ವ ಕನ್ನಡಿಗರ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ 2023-24ನೇ ಸಾಲಿನ ಸಾರ್ವಜನಿಕ ಶಿಕ್ಷಣ ಇಲಾಖೆಯ ಎಸ್.ಎಸ್.ಎಲ್.ಸಿ. ಪರೀಕ್ಷೆ ಎದುರಿಸುವ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪರೀಕ್ಷಾ
ಪೂರ್ವ ಸಿದ್ಧತಾ ಉಚಿತ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.
ನ. 29 ಶುಕ್ರವಾರದಂದು ಬೀದರ್‌ನ ಪೂಜ್ಯ ಡಾ. ಚನ್ನಬಸವ ಪಟ್ಟದೇವರ ರಂಗ ಮಂದರಿದಲ್ಲಿ ನಡೆಯಲಿರುವ ಈ ಕಾರ್ಯಾಗಾರದಲ್ಲಿ ನಾಡಿನ ಖ್ಯಾತ ಮಾನಸಿಕ ವೈದ್ಯ ದೂರದರ್ಶನದ ಚಂದನ ವಾಹಿನಿಯಲ್ಲಿ ನಿರಂತರ “ಥಟ್ ಅಂತ ಹೇಳಿ” ಕಾರ್ಯಕ್ರಮ ನಡೆಸಿಕೊಡುತ್ತಿರುವ ಡಾ|| ನಾ.ಸೋಮೇಶ್ವರರವರು ರಚಿಸಿದ “ಓದು ಕಲಿಕೆ ನೆನಪು” ಪುಸ್ತಕ ವಿತರಿಸಲಾಗುವುದು ಎಂದು ವಿಶ್ವ ಕನ್ನಡಿಗರ ಸಂಸ್ಥೆಯ ರಾಜ್ಯಾಧ್ಯಕ್ಷರಾದ ಡಾ. ಸುಬ್ಬಣ್ಣ ಕರಕನಳ್ಳಿ ಪ್ರಕಟಿಸಿದ್ದಾರೆ.
ವಿದ್ಯಾರ್ಥಿಗಳ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶಕ್ಕಾಗಿ ಮಕ್ಕಳಿಗೆ ಪರೀಕ್ಷೆಯ ಭಯ ದೂರ ಮಾಡಿ, ಧೈರ್ಯ ತುಂಬುವ ಈ ಕಾರ್ಯಾಗಾರದಲ್ಲಿ ಮಕ್ಕಳು, ಪೋಷಕರು, ಶಿಕ್ಷಕ- ಶಿಕ್ಷಕಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಕಲಾಕುಂಚ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ೯೯೦೧೬೧೨೧೩೯ ಈ ಸನೀಹವಾಣಿಗೆ ಸಂಪರ್ಕಿಸಬಹುದು.