ಸೆ.26ರಂದು ಅಷ್ಟಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಮುಷ್ಟಿ ಕಾಣಿಕೆ ಸಮರ್ಪಣೆ

0
6

ನಡೂರು ಕಾಡೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ನಡೂರು ಕಾಡೂರು ಅಷ್ಟಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಮುಷ್ಟಿ ಕಾಣಿಕೆ ಸಮರ್ಪಣೆ ಕಾರ್ಯಕ್ರಮ ಸೆ.26ರಂದು ಶನಿವಾರ ನಡೆಯಲಿದೆ.

ಕಾರ್ಯಕ್ರಮವು ಬೆಳಗ್ಗೆ 10.30ಕ್ಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸನ್ನಿಧಿಯಲ್ಲಿ ನಡೆಯಲಿದ್ದು, ಬಳಿಕ ಮಧ್ಯಾಹ್ನ 12.30ಕ್ಕೆ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.

ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ನಡೆಯುತ್ತಿರುವ ಮುಷ್ಟಿ ಕಾಣಿಕೆ ಸಮರ್ಪಣೆ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ಶಕ್ತ್ಯಾನುಸಾರ ಮುಷ್ಟಿ ಕಾಣಿಕೆಯನ್ನು ಸಮರ್ಪಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಜೀರ್ಣೋದ್ಧಾರ ಸಮಿತಿ ಮನವಿ ಮಾಡಿದೆ.