Friday, March 21, 2025
HomeUncategorizedಹಿಂದೂ ಧರ್ಮದ ಒಂದು ಸಮಾಜದ ಹೆಣ್ಣು ಮಕ್ಕಳು ವೇಶ್ಯೆಯರಾಗಿದ್ದಾರೆ ಎಂದ ಅಧಿಕಾರಿ ವಿರುದ್ಧ ಭಾರೀ ಆಕ್ರೋಶ

ಹಿಂದೂ ಧರ್ಮದ ಒಂದು ಸಮಾಜದ ಹೆಣ್ಣು ಮಕ್ಕಳು ವೇಶ್ಯೆಯರಾಗಿದ್ದಾರೆ ಎಂದ ಅಧಿಕಾರಿ ವಿರುದ್ಧ ಭಾರೀ ಆಕ್ರೋಶ

ಮಂಗಳೂರು: ಸರ್ಕಾರಿ ಅಧಿಕಾರಿಯೊಬ್ಬರು ಹಿಂದೂ ಹೆಣ್ಣು ಮಕ್ಕಳ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿರುವ ಬಗ್ಗೆ ದೂರು ದಾಖಲಾಗಿದೆ. ಹಿಂದೂ ಧರ್ಮದ ಒಂದು ಸಮಾಜಕ್ಕೆ ಸೇರಿದ ಒಂದು ಲಕ್ಷ ಹೆಣ್ಣು ಮಕ್ಕಳು ವೇಶ್ಯೆಯರಾಗಿದ್ದಾರೆ ಎಂದು ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಹೇಳಿದ್ದಾರೆನ್ನಲಾದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿರುವ ಹಿನ್ನೆಲೆಯಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಈ ಕುರಿತು ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಬೆಳ್ಳಾರೆ ಪೊಲೀಸ್‌ ಠಾಣೆ ಸೇರಿದಂತೆ ಎರಡು ಕಡೆ ಪ್ರತ್ಯೇಕ ದೂರು ದಾಖಲಿಸಿದ್ದಾರೆ.
ಎರಡು ದಿನಗಳ ಹಿಂದೆ ಸಂಜೀವ ಪೂಜಾರಿ ಫೇಸ್ಬುಕ್‌ ಖಾತೆಯಲ್ಲಿ ಮುಸ್ಲಿಮರ ಪರವಾಗಿ ಪೋಸ್ಟ್‌ ಹಾಕಿದ್ದನು. ಸಹಾಯ ಮಾಡುವುದರಲ್ಲಿ ಮುಸ್ಲಿಮರು ಎತ್ತಿದ ಕೈ ಎಂದು ಸಂಜೀವ ಪೂಜಾರಿ ಪೋಸ್ಟ್‌ ಮಾಡಿದ್ದರೆನ್ನಲಾಗಿದೆ. ಇದನ್ನು ವಿರೋಧಿಸಿ ಹಿಂದೂ ಕಾರ್ಯಕರ್ತ ಸುರೇಶ್‌ ಕಾಸರಗೋಡು ಎಂಬವರು ಸಂಜೀವ ಪೂಜಾರಿಗೆ ಕರೆ ಮಾಡಿದ್ದರು. ಈ ವೇಳೆ ಮಾತನಾಡುತ್ತಾ, ದಕ್ಷಿಣ ಕನ್ನಡ ಜಿಲ್ಲೆಯ ಒಂದು ಸಮಾಜಕ್ಕೆ ಸೇರಿದ ಒಂದು ಲಕ್ಷ ಹುಡುಗಿಯರು ವೇಶ್ಯೆಯರಾಗಿದ್ದಾರೆ. ಇದಕ್ಕೆ ನನ್ನ ಬಳಿ 10,000 ದಾಖಲೆಗಳಿವೆ. ಹಿಂದುತ್ವದ ಹುಡುಗರು ವೇಶ್ಯೆಯರನ್ನಾಗಿ ಮಾಡಿದ್ದಾರೆ. ಇದಕ್ಕೆ ಹಿಂದೂ ಸಂಘಟನೆಯ ಯುವಕರು ಕಾರಣ. ಭಜನೆ ಮಾಡಿದ ಹಿಂದೂ ಹುಡುಗಿಯರನ್ನು ಮರದ ಅಡಿಯಲ್ಲಿ ಮಲಗಿಸಿದವರು ಹಿಂದೂ ಹುಡುಗರು ಎಂದು ಹಿಂದೂ ಹೆಣ್ಣುಮಕಕ್ಕಳ ಬಗ್ಗೆ ತೀರಾ ಅವಹೇಳನಕಾರಿಯಾಗಿ ಮಾತನಾಡಿದ್ದಾರೆನ್ನಲಾಗಿದೆ.
ಸಂಜೀವ ಪೂಜಾರಿ ಈ ಹಿಂದೆಯೂ ವಿವಾದಾತ್ಮಕ ಹೇಳಿಕೆಗೆ ಸೇವೆಯಿಂದ ಅಮಾನಾತಾಗಿದ್ದರು. ಇದೀಗ ಹೆಣ್ಣು ಮಕ್ಕಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾನೆ. ಈತನ ವಿರುದ್ಧ ಪ್ರಕರಣ ದಾಖಲಿಸದಿದ್ದರೆ ಡಿವೈಎಸ್‌ಪಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ. ತಕ್ಷಣ ಆತನನ್ನು ಸೇವೆಯಿಂದ ವಜಾಗೊಳಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಸಂಘಟನೆ ಕಾರ್ಯಕರ್ತರು ಆಗ್ರಹಿಸಿದ್ದಾರೆ.

RELATED ARTICLES
- Advertisment -
Google search engine

Most Popular