ಅ.25ರಂದು ತಾಲೂಕು ಮಟ್ಟದ ವಾಲಿಬಾಲ್, ತ್ರೋಬಾಲ್ ಪಂದ್ಯಾಟ ಕುಲಾಲ ಟ್ರೋಫಿ

0
47

ಕಾರ್ಕಳ : ಕಾರ್ಕಳ ತಾಲೂಕು ಕುಲಾಲ ಸುಧಾರಕ ಸಂಘ (ರಿ.) ಇದರ 31ನೇ ವಾರ್ಷಿಕ ಮಹಾಸಭೆಯ ಅಂಗವಾಗಿ ತಾಲೂಕು ಮಟ್ಟದ ವಾಲಿಬಾಲ್, ತ್ರೋಬಾಲ್ ಪಂದ್ಯಾಟ ಕುಲಾಲ ಟ್ರೋಫಿ 2026 ಹಾಗೂ ವಿವಿಧ ಆಟೋಟ ಸ್ಪರ್ಧೆಗಳನ್ನು ಅ.25ರಂದು ಸ್ವರಾಜ್ಯ ಮೈದಾನ, ಕಾರ್ಕಳದಲ್ಲಿ ಆಯೋಜಿಸಲಾಗಿದೆ.

ಬೆಳಗ್ಗೆ 9 ಗಂಟೆಯಿಂದ ಕ್ರೀಡಾಕೂಟ ನಡೆಯಲಿದ್ದು, ಮಹಿಳೆಯರಿಗಾಗಿ ತಾಲೂಕು ಮಟ್ಟದ ತ್ರೋಬಾಲ್ ಹಾಗೂ ಪುರುಷರಿಗಾಗಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಆಯೋಜಿಸಲಾಗಿದೆ. ಮಹಿಳೆಯರ ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಬಹುಮಾನವಾಗಿ ₹5,000 ಹಾಗೂ ಶಾಶ್ವತ ಫಲಕ, ದ್ವಿತೀಯ ₹3,000 ಹಾಗೂ ಶಾಶ್ವತ ಫಲಕ ನೀಡಲಾಗುವುದು. ತೃತೀಯ ಮತ್ತು ಚತುರ್ಥ ಸ್ಥಾನ ಪಡೆದ ತಂಡಗಳಿಗೆ ಶಾಶ್ವತ ಫಲಕ ನೀಡಿ ಗೌರವಿಸಲಾಗುವುದು.

ಪುರುಷರ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಬಹುಮಾನ ₹6,000 ಹಾಗೂ ಶಾಶ್ವತ ಫಲಕ, ದ್ವಿತೀಯ ಬಹುಮಾನ ₹4,000 ಹಾಗೂ ಶಾಶ್ವತ ಫಲಕ ನೀಡಲಾಗುವುದು. ತೃತೀಯ ಹಾಗೂ ಚತುರ್ಥ ಸ್ಥಾನ ಪಡೆದ ತಂಡಗಳಿಗೂ ಶಾಶ್ವತ ಫಲಕ ನೀಡಲಾಗುವುದು.

ಇದರೊಂದಿಗೆ ಎಲ್‌ಕೆಜಿ, ಯುಕೆಜಿ ಹಾಗೂ ಅಂಗನವಾಡಿ ಮಕ್ಕಳಿಗೆ ವಿವಿಧ ಮನೋರಂಜನಾ ಸ್ಪರ್ಧೆಗಳು ನಡೆಯಲಿವೆ. 1ರಿಂದ 3ನೇ ತರಗತಿ, 4ರಿಂದ 7ನೇ ತರಗತಿ, 8ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಬಾಲಕ–ಬಾಲಕಿಯರ ವಿಭಾಗದಲ್ಲಿ ಓಟ, ಲಾಂಗ್ ಜಂಪ್, ಅಂಬೆ ಚಮಚ, ಶಾಟ್‌ಪುಟ್ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಹಿರಿಯರ ವಿಭಾಗದಲ್ಲಿಯೂ ಪುರುಷರು ಹಾಗೂ ಮಹಿಳೆಯರಿಗೆ ಪ್ರತ್ಯೇಕವಾಗಿ ಓಟ, ಲಾಂಗ್ ಜಂಪ್, ಶಾಟ್‌ಪುಟ್, ಅಂಬೆ ಚಮಚ ಸೇರಿದಂತೆ ವಿವಿಧ ಸ್ಪರ್ಧೆಗಳು ನಡೆಯಲಿವೆ. ಎಲ್ಲಾ ವಯೋಮಿತಿಯವರಿಗೂ ವಿವಿಧ ಮನೋರಂಜನಾ ಕ್ರೀಡೆಗಳನ್ನು ಆಯೋಜಿಸಲಾಗಿದೆ.

ವೈಯಕ್ತಿಕ ವಿಭಾಗದಲ್ಲಿ ವಿಜೇತರಾದವರಿಗೆ ಚಿನ್ನ, ಬೆಳ್ಳಿ ಹಾಗೂ ಕಂಚಿನ ಪದಕ ನೀಡಿ ಗೌರವಿಸಲಾಗುವುದು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ನ.1ರಂದು ನಡೆಯುವ ಕುಲಾಲ ಸಂಘದ ಮಹಾಸಭೆಯಲ್ಲಿ ವಿತರಿಸಲಾಗುವುದು.

ವಾಲಿಬಾಲ್ ಹಾಗೂ ತ್ರೋಬಾಲ್ ಪಂದ್ಯಾಟದಲ್ಲಿ ಭಾಗವಹಿಸುವ ಸ್ಪರ್ಧಾಳುಗಳು ಆಧಾರ್ ಕಾರ್ಡ್ ಪ್ರತಿ ಕಡ್ಡಾಯವಾಗಿ ತರಬೇಕು. ಸ್ಪರ್ಧಾಳುಗಳು ತಮ್ಮ ತಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಯೇ ಸ್ಪರ್ಧಿಸಬೇಕು. ತಂಡಗಳ ನೋಂದಣಿ ಸಂದರ್ಭದಲ್ಲಿ ತಮ್ಮ ಗ್ರಾಮದ ಅಥವಾ ಸಂಘದ ಹೆಸರನ್ನು ನಮೂದಿಸಬೇಕು. ಪಂದ್ಯಾಟವು ಸ್ಟ್ಯಾಂಡಿಂಗ್ ಮಾದರಿಯಲ್ಲಿ ನಡೆಯಲಿದೆ.

ತಂಡಗಳ ನೋಂದಣಿಗೆ ಅ.20 ಕೊನೆಯ ದಿನಾಂಕವಾಗಿದ್ದು, ಮೊದಲು ನೋಂದಾಯಿಸುವ 25 ತಂಡಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಭಾಗವಹಿಸುವ ತಂಡಗಳು ಬೆಳಗ್ಗೆ 9 ಗಂಟೆಗೆ ಹಾಜರಿರಬೇಕು. ಮಧ್ಯಾಹ್ನ ಭೋಜನದ ವ್ಯವಸ್ಥೆ ಮಾಡಲಾಗಿದೆ. ಕ್ರೀಡಾಕೂಟದಲ್ಲಿ ಶಿಸ್ತು ಕಾಪಾಡುವುದು ಕಡ್ಡಾಯವಾಗಿದ್ದು, ಯಾವುದೇ ಅಶಿಸ್ತಿಗೆ ಅವಕಾಶವಿರುವುದಿಲ್ಲ. ತೀರ್ಪುಗಾರರು ಹಾಗೂ ಸಂಘಟಕರ ತೀರ್ಮಾನವೇ ಅಂತಿಮವಾಗಿರುತ್ತದೆ.

ವಾಲಿಬಾಲ್ ಹಾಗೂ ತ್ರೋಬಾಲ್ ಪಂದ್ಯಾಟದಲ್ಲಿ ಭಾಗವಹಿಸುವ ಎಲ್ಲಾ ತಂಡಗಳನ್ನು ಗೌರವಿಸಲಾಗುವುದು. ಸಮಾಜದ ಒಳಿತಿಗಾಗಿ ಹಾಗೂ ಐಕ್ಯತೆಗಾಗಿ ಕುಟುಂಬ ಸಮೇತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘದ ವತಿಯಿಂದ ಮನವಿ ಮಾಡಲಾಗಿದೆ.

ಪುರುಷರ ವಾಲಿಬಾಲ್ ಪಂದ್ಯಾಟಕ್ಕೆ ವಿಶ್ವನಾಥ ಕುಲಾಲ್ ನಿಟ್ಟೆ (9964579931) ಅವರನ್ನು, ಮಹಿಳೆಯರ ತ್ರೋಬಾಲ್ ಪಂದ್ಯಾಟಕ್ಕೆ ಜ್ಯೋತಿ ಕುಲಾಲ್ ಪದವು (9845820137) ಅವರನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ದಿವಾಕರ ಬಂಗೇರ (9880197475), 9945944504 ಹಾಗೂ 9902848404 ಸಂಖ್ಯೆಯನ್ನು ಸಂಪರ್ಕಿಸಬಹುದು.