ದಾವಣಗೆರೆ : ದಾವಣಗೆರೆಯ ಕಲಾಸಿರಿ, ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 7 ರಂದು ಮಂಗಳವಾರ ಸಂಜೆ 5 ಗಂಟೆಗೆ ದಾವಣಗೆರೆಯ ಎಸ್.ನಿಜಲಿಂಗಪ್ಪ ಬಡಾವಣೆಯ ಕರ್ನಾಟಕ ಹಿಮಫಿಲಿಯಾ ಸೊಸೈಟಿ ಸಭಾಂಗಣದಲ್ಲಿ ಇತ್ತೀಚಿಗೆ ಪದ್ಮಶ್ರೀ ಪ್ರಶಸ್ತಿ ಪಡೆದ ಡಾ|| ಸುರೇಶ್ ಹನಗವಾಡಿ ಮತ್ತು ನಗರದ ಲಯನ್ಸ್ ಕ್ಲಬ್ ಗರ್ವನರ್‌ರಾದ ಆರ್.ಹೆಚ್. ಶ್ರೀನಿವಾಸಮೂರ್ತಿಯವರಿಗೆ ಗೌರವಿಸಿ ಸನ್ಮಾನ ಮಾಡಲಾಗುವುದು ಎಂದು ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈಯವರು ತಿಳಿಸಿದ್ದಾರೆ.
ಸಮಾರಂಭದ ಉದ್ಘಾಟನೆ ಮತ್ತು ಅಧ್ಯಕ್ಷತೆಯನ್ನು ಕಲಾಸಿರಿ, ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಗಳ ಅಧ್ಯಕ್ಷರಾದ ವಾಸುದೇವ ಲಕ್ಷ್ಮಣ್ ರಾಯ್ಕರ್ ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಿವೃತ್ತ ಪೊಲೀಸ್ ಅಧೀಕ್ಷಕರಾದ ರವಿನಾರಾಯಣ್, ದಾವಣಗೆರೆ ಲಯನ್ಸ್ ಕಲ್ಬ್ ಮಾಜಿ ಜಿಲ್ಲಾ ರಾಜ್ಯಪಾಲರಾದ ಬೆಳ್ಳೂಡಿ ಶಿವಕುಮಾರ್, ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಗಳ ಗೌರವ ಅಧ್ಯಕ್ಷರಾದ ಕೆ.ಹೆಚ್.ಮಂಜುನಾಥ್, ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕರಾದ ಜ್ಯೋತಿ ಗಣೇಶ್‌ಶೆಣೈ, ಕಲಾಕುಂಚ ಮಹಿಳಾ ವಿಭಾಗದ ಅಧ್ಯಕ್ಷರಾದ ಹೇಮಾ ಶಾಂತಪ್ಪ ಪೂಜಾರಿ ಆಗಮಿಸಲಿದ್ದಾರೆ.
ಈ ಸಾಧಕರ ಸನ್ಮಾನ ಸಮಾರಂಭಕ್ಕೆ ಅಭಿಮಾನಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಬೇಕೆಂದು ಕಲಾಕುಂಚು ಪ್ರಧಾನ ಕಾರ್ಯದರ್ಶಿ ಕೆ.ಸಿ. ಉಮೇಶ್ ವಿನಂತಿಸಿದ್ದಾರೆ.
