ದಾವಣಗೆರೆ ಜಿಲ್ಲಾ ಪೊಲೀಸ್ ಇಲಾಖೆ ಮತ್ತು ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಡಿಸೆಂಬರ್ ೭ ರಂದು ಭಾನುವಾರ ಬೆಳಿಗ್ಗೆ ೧೦ ಗಂಟೆಗೆ ನಗರದ ಪಿ.ಜೆ. ಬಡಾವಣೆಯ ಪೊಲೀಸ್ ಸಮುದಾಯ ಭವನ ಪೊಲೀಸ್ ಕವಾಯತು ಆವರಣದಲ್ಲಿ 2025-29ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಭಾಗಿಯಾಗುವ ಮಕ್ಕಳಿಗೆ ಪರೀಕ್ಷೆ ಭಯ ದೂರಮಾಡುವ ಧೈರ್ಯ ತುಂಬುವ ಉತ್ತಮ ಫಲಿತಾಂಶದೊಂದಿಗೆ ದಾವಣಗೆರೆಯಲ್ಲಿ ವ್ಯಾಸಂಗ ಮಾಡುವ ಶಿಕ್ಷಣ ಸಂಸ್ಥೆಗೆ ಹೆತ್ತ ತಂದೆ-ತಾಯಿಗಳಿಗೆ ಒಳ್ಳೆಯ ಹೆಸರು ತರುವ ಸದುದ್ದೇಶದಿಂದ ಈ ಉಚಿತ ಕಾರ್ಯಾಗಾರ ಹಮ್ಮಿಕೊಂಡಿದ್ದು ,ದಾವಣಗೆರೆ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀಮತಿ ಉಮಾ ಪ್ರಶಾಂತ್ ಅಧ್ಯಕ್ಷತೆ ವಹಿಸಿ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ದಾವಣಗೆರೆ ಪೊಲೀಸ್ ಉಪಾಧೀಕ್ಷಕರಾದ ಪ್ರಕಾಶ್ ಪಿ.ಬಿ. ನಗರದ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಶರಣ ಬಸವೇಶ್ವರ ಬಿ.ಆರ್. ಪೊಲೀಸ್ ನಿರೀಕ್ಷಕರಾದ ಪ್ರಶಾಂತ್ ಕೆ.ಎಸ್. ಆಗಮಿಸಲಿದ್ದಾರೆ. ಮಕ್ಕಳಿಗೆ ಪರೀಕ್ಷಾ ಪೂರ್ವಭಾವಿ ತಯಾರಿ ಉಚಿತ ಕಾರ್ಯಾಗಾರವನ್ನು ಕಲಾಕುಂಚದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈಯವರು ನಡೆಸಿಕೊಡಲಿದ್ದಾರೆ.
ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕರಾದ ಶ್ರೀಮತಿ ಜ್ಯೋತಿ ಗಣೇಶ್ ಶೆಣೈ, ಕಲಾಕುಂಚ ಮಹಿಳಾ ವಿಭಾಗದ ಅಧ್ಯಕ್ಷರಾದ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿಯವರು ವೇದಿಕೆಯಲ್ಲಿ ಗೌರವ ಉಪಸ್ಥಿತರಿರುತ್ತಾರೆ.
2025-29ನೇ ಸಾಲಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಕಾರ್ಯಾಗಾರ ಯಶಸ್ವಿಗೊಳಿಸಿ ದಾವಣಗೆರೆ ಜಿಲ್ಲೆಗೆ ಉತ್ತಮ ಫಲಿತಾಂಶ ಬಂದು ಹೆಸರು ತರಲಿ ಎಂದು ಕಲಾಕುಂಚದ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ವಿನಂತಿಸಿದ್ದಾರೆ.
Home Uncategorized ಡಿ. ೭ ರಂದು ದಾವಣಗೆರೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ಎಸ್.ಎಸ್.ಎಲ್.ಸಿ. ಮಕ್ಕಳಿಗೆ ಪರೀಕ್ಷಾ ಪೂರ್ವಭಾವಿ ತಯಾರಿ...

