ದಾವಣಗೆರೆ-ಡಿಸೆಂಬರ್, ದಾವಣಗೆರೆಯ ಕನ್ನಡ ಸಾಹಿತ್ಯ ಪರಿಷತ್ ಮತ್ತು ಕಲಾಕುಂಚ ವಿದ್ಯಾನಗರ ಶಾಖೆಯ ಸಂಯುಕ್ತಾಶ್ರಯದಲ್ಲಿ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಎದುರಿಸುವ ಮಕ್ಕಳಿಗೆ ಡಿಸೆಂಬರ್ 28 ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ವಿದ್ಯಾನಗರ ರಸ್ತೆಯಲ್ಲಿರುವ ಕುವೆಂಪು ಕನ್ನಡ ಭವನದಲ್ಲಿ ಉಚಿತ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ , ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಬಿ. ವಾಮದೇವಪ್ಪ ತಿಳಿಸಿದ್ದಾರೆ .
ಈ ಬಾರಿ ದಾವಣಗೆರೆ ಜಿಲ್ಲೆಗೆ ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಥಮ ಸ್ಥಾನಕ್ಕೆ ಬರುವ ಮಕ್ಕಳ ಭವ್ಯ ದಿವ್ಯ ಪ್ರಜ್ವಲ ಭವಿಷ್ಯದ ಸದುದ್ದೇಶದಿಂದ ಮಕ್ಕಳಿಗೆ ಪರೀಕ್ಷೆ ಭಯ ದೂರ ಮಾಡುವ ಉತ್ತಮ ಫಲಿತಾಂಶದೊಂದಿಗೆ ವ್ಯಾಸಂಗ ಮಾಡಿದ ವಿದ್ಯಾಸಂಸ್ಥೆಗೆ , ಹೆತ್ತ ತಂದೆ-ತಾಯಿಗಳಿಗೆ ಹುಟ್ಟಿದ ಊರಿಗೆ ಒಳ್ಳೆಯ ಹೆಸರು ತರಬೇಕಾದ ಅವಶ್ಯಕತೆ ಇರಬೇಕಾಗಿದೆ ಎಂದು ಕಾರ್ಯಾಗಾರ ನಡೆಸುವ ಕಲಾಕುಂಚದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈಯವರು ಪ್ರಕಟಿಸಿದ್ದಾರೆ .
ಈ ಸಾಲಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಪೋಷಕರು, ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಉಚಿತ ಕಾರ್ಯಾಗಾರ ಯಶಸ್ವಿಗೊಳಿಸಬೇಕಾಗಿ , ಕಲಾಕುಂಚದ ವಿದ್ಯಾನಗರ ಶಾಖೆಯ ಅಧ್ಯಕ್ಷರಾದ ರಾಜಶೇಖರ್ ಬೆನ್ನೂರು ವಿನಂತಿಸಿದ್ದಾರೆ . ಹೆಚ್ಚಿನ ಮಾಹಿತಿಗೆ 9448423683, 9538732777 ಈ ಸನೀಹವಾಣಿಗಳಿಗೆ ಸಂಪರ್ಕಿಸಬಹುದು .

