ಬೆಂಗಳೂರು : ಕರ್ನಾಟಕ ಮರಾಟಿ ಸಂಘ (ರಿ.), ಬೆಂಗಳೂರು ವತಿಯಿಂದ ಜುಲೈ 26ರಂದು ‘ಆಟಿಡೊಂಜಿ ದಿನ–2026’ ಕಾರ್ಯಕ್ರಮವನ್ನು ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗಿದೆ.
ರಾಜಾಜಿನಗರದಲ್ಲಿರುವ ಶ್ರೀ ಶರಣ ಸೇವಾ ಸಮಾಜ (ರಿ.) ಮಹಾಮನೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವು ತುಳುನಾಡಿನ ಸಂಪ್ರದಾಯ ಹಾಗೂ ಆಟಿ ತಿಂಗಳ ಸಂಸ್ಕೃತಿಯನ್ನು ನೆನಪಿಸುವ ಉದ್ದೇಶದಿಂದ ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಆಟಿ ತಿಂಗಳ ವಿಶೇಷ ಆಚರಣೆಗಳೊಂದಿಗೆ ಆಟಿಯ ಸಾಂಪ್ರದಾಯಿಕ ವಿಶೇಷ ಭೋಜನದ ವ್ಯವಸ್ಥೆ ಮಾಡಲಾಗಿದ್ದು, ಬೆಂಗಳೂರಿನಲ್ಲಿ ನೆಲೆಸಿರುವ ಮರಾಟಿ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘದ ಅಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಮನವಿ ಮಾಡಿದ್ದಾರೆ.
ಈ ಕಾರ್ಯಕ್ರಮದ ಮೂಲಕ ತುಳುನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಪ್ರಯತ್ನ ನಡೆಯಲಿದ್ದು, ಸಮಸ್ತ ಮರಾಟಿ ಸಮಾಜದವರು ಕುಟುಂಬ ಸಮೇತರಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸಂಘದ ಪದಾಧಿಕಾರಿಗಳು ಕೋರಿದ್ದಾರೆ.

