ಜೂನ್ 15 ರಂದು ಶ್ರೀಮತಿ ಪ್ರೇಮಾ ಅರುಣಾಚಲ ಎನ್. ರೇವಣಕರ್ ಪ್ರತಿಷ್ಠಾನದಿಂದ
“ಶಾರದಾ ಪುರಸ್ಕಾರ” ರಾಜ್ಯ ಪ್ರಶಸ್ತಿ ಪ್ರದಾನ

0
77


ದಾವಣಗೆರೆಯ ಶ್ರೀಮತಿ ಪ್ರೇಮಾ ಅರುಣಾಚಲ ಎನ್. ರೇವಣಕರ್ ಪ್ರತಿಷ್ಠಾನದಿಂದ 2024-25 ನೇ ಸಾಲಿನ ಸಾರ್ವಜನಿಕ ಶಿಕ್ಷಣ ಇಲಾಖೆಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ದೈವಜ್ಞ ಬ್ರಾಹ್ಮಣ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ “ಶಾರದಾ ಪುರಸ್ಕಾರ” ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜೂನ್ 15 ರಂದು ಭಾನುವಾರ ಬೆಳಿಗ್ಗೆ 10-05ಕ್ಕೆ ದಾವಣಗೆರೆಯ ವಿನೋಬಾನಗರದ ಮೊದಲನೇ ಮುಖ್ಯ ರಸ್ತೆಯಲ್ಲಿರುವ ಶ್ರೀಮತಿ ಗೌರಮ್ಮ ನರಹರಿಶೇಟ್ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರತಿಷ್ಠಾನದ ಗೌರವ ಸಲಹೆಗಾರರಾದ ಸಾಲಿಗ್ರಾಮ ಗಣೇಶ್‌ಶೆಣೈ ತಿಳಿಸಿದ್ದಾರೆ.
ಸಮಾರಂಭದ ಉದ್ಘಾಟನೆಯನ್ನು ಧಾರವಾಡದ ಅಖಿಲ ಕರ್ನಾಟಕದ ದೈವಜ್ಞ ಸಮಾಜದ ಅಧ್ಯಕ್ಷರಾದ ಮಾನ್ಯಶ್ರೀ ರವಿ ಎಸ್.ಗಾವಾಂಕರ್ ನೆರವೇರಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಪ್ರತಿಷ್ಠಾನದ ಸಂಸ್ಥಾಪಕರಾದ ಡಾ. ನಲ್ಲೂರು ಅರುಣಾಚಲ ಎನ್.ರೇವಣಕರ್ ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಾರವಾರದ ಬಿಜೆಪಿ ವಿಶ್ರಾಂತ ಶಾಸಕರಾದ ಮಾನ್ಯಶ್ರೀ ಗಂಗಾಧರ ಎನ್.ಭಟ್, ಮಾಪುಸಾ ಗೋವಾದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಶ್ರೀ ರಾಮ್ ಸುಬ್ರಾಯ್ ಪ್ರಭು ದೇಸಾಯಿ, ದಾವಣಗೆರೆಯ ದೈವಜ್ಞ ಸಮಾಜದ ಅಧ್ಯಕ್ಷರಾದ ಪ್ರಶಾಂತ್ ವಿಶ್ವನಾಥ್ ವೆರ್ಣೇಕರ್, ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀಮತಿ ಪ್ರೇಮಾ ಅರುಣಾಚಲ ಎನ್.ರೇವಣಕರ್ ಆಗಮಿಸಲಿದ್ದಾರೆ.
ಶೈಕ್ಷಣಿಕ ಕಾಳಜಿಯಿಂದ ಸಾಧನೆ ಮಾಡಿರುವ ಈ ಮಕ್ಕಳ ವೈಭವಪೂರ್ಣ ವಿಜೃಂಭಣೆ ಸಮಾರಂಭಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಅಗಮಿಸಿ ಯಶಸ್ವಿಗೊಳಿಸಬೇಕಾಗಿ ಪ್ರತಿಷ್ಠಾನದ ನಿರ್ದೇಶಕರಾದ ನಲ್ಲೂರು ಲಕ್ಷö್ಮಣ್‌ರಾವ್ ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here