Tuesday, May 13, 2025
Homeಮಂಗಳೂರುಜು.30ರಂದು ಕ್ಯಾಪ್ಟನ್ ಸುಧೀರ್ .ಜಿ. ಅಮೀನ್. ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ

ಜು.30ರಂದು ಕ್ಯಾಪ್ಟನ್ ಸುಧೀರ್ .ಜಿ. ಅಮೀನ್. ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಜು.30ರಂದು ಬೆಳಗ್ಗೆ 11.30 ಕ್ಕೆ  ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಭಾರತೀಯ ವಾಯು ಸೇನೆಯ ನಿವೃತ್ತ ಗ್ರೂಪ್ ಕ್ಯಾಪ್ಟನ್ ಸುಧೀರ್. ಜಿ.ಅಮೀನ್  ಭಾಗವಹಿಸಿ ಗೌರವ ಸ್ವೀಕರಿಸಲಿದ್ದಾರೆ. 

ಹಿರಿಯ ಪತ್ರಕರ್ತ ಪರಮಾನಂದ ಸಾಲ್ಯಾನ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸುವರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ .ಆರ್. ಉಪಸ್ಥಿತರಿರುವರು ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular