ದಾವಣಗೆರೆ : ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಗಾನ ಕುಂಚದ ಆಶ್ರಯದಲ್ಲಿ ಲೋಕಸಭಾ ಚುನಾವಣೆ ಪ್ರಯುಕ್ತ ಮೇ.1 ರಂದು ಬೆಳಿಗ್ಗೆ 10ಗಂಟೆಗೆ ನಗರದ ಕಲಾಕುಂಚ ಕಚೇರಿಯ ಸಭಾಂಗಣದಲ್ಲಿ ಮತದಾನ ಜಾಗೃತಿ ಕುರಿತು ಗೀತಗಾನಯಾನ ಹಮ್ಮಿಕೊಳ್ಳಲಾಗಿದೆ ಎಂದು ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್‌ಶೆಣೈ ತಿಳಿಸಿದ್ದಾರೆ. ಸಾರ್ವಜನಿಕರಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸಲು ನಮ್ಮ ನಿಮ್ಮೆಲ್ಲರ ಜೀವನದ ಅಪರೂಪದ ಆಜನ್ಮ ಹಕ್ಕನ್ನು ಹಾಡಿನ ಮೂಲಕ ಮನರಂಜನೆಯೊಂದಿಗೆ ಕನ್ನಡ ಗೀತಯಾನದ ಈ ಕಾರ್ಯಕ್ರಮಕ್ಕೆ ಸಂಗೀತಾಸಕ್ತ ಸಾರ್ವಜನಿಕರು ಹೆಚ್ಚಿನ
ಸಂಖ್ಯೆಯಲ್ಲಿ ಆಗಮಿಸಿ ಈ “ಮತದಾನ ಗಾನಯಾನ’ ಯಶಸ್ವಿಗೊಳಿಸಬೇಕಾಗಿ ಸಂಸ್ಥೆಯ ಅಧ್ಯಕ್ಷರಾದ ಕೆ.ಹೆಚ್.ಮಂಜುನಾಥ್ ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 9538732777 ಈ ಸನೀಹವಾಣಿಗೆ ಸಂಪರ್ಕಿಸಬಹುದು.