ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯಿAದ ಪ್ರತೀ ವರ್ಷದಂತೆ ಈ ವರ್ಷವೂ ಎಸ್.ಎಸ್.ಎಲ್.ಸಿ. ಪರೀಕ್ಷೆ ಎದುರಿಸುವ ಮಕ್ಕಳಿಗೆ ಪರೀಕ್ಷಾ ಪೂರ್ವಭಾವಿ ತಯಾರಿ ಉಚಿತ ಕಾರ್ಯಾಗಾರ ನವಂಬರ್ 10 ರಂದು ಸೋಮವಾರ ಮಧ್ಯಾಹ್ನ 3 ಗಂಟೆಗೆ ನಗರದ ಹದಡಿ ರಸ್ತೆಯಲ್ಲಿರುವ ಶ್ರೀ ತರಳಬಾಳು ಜಗದ್ಗುರು ಪ್ರೌಢಶಾಲೆಯ ಅನುಭವ ಮಂಟಪದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ತಿಳಿಸಿದ್ದಾರೆ.
ಕಲಾಕುಂಚ ಶ್ರೀ ತರಳಬಾಳು ಜಗದ್ಗುರು ಪ್ರೌಢಶಾಲೆಯ ಸಂಯುಕ್ತಾಶ್ರಯದಲ್ಲಿ ನಡೆಯುವ ಈ ಕಾರ್ಯಾಗಾರ ಸಮಾರಂಭವನ್ನು ದಾವಣಗೆರೆಯ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಬಿ. ವಾಮದೇವಪ್ಪ ಉದ್ಘಾಟಿಸಲಿದ್ದಾರೆ.
ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ತರಳಬಾಳು ಜಗದ್ಗುರು ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ರವಿಕುಮಾರ್ ಹೆಚ್.ಎಸ್. ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಅಧ್ಯಕ್ಷರಾದ ಕೆ.ಹೆಚ್.ಮಂಜುನಾಥ್, ಕಲಾಕುಂಚ ಮಹಿಳಾ ವಿಭಾಗದ ಅಧ್ಯಕ್ಷರಾದ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಆಗಮಿಸಲಿದ್ದಾರೆ, ಮಕ್ಕಳಿಗೆ ಮಾನಸಿಕವಾಗಿ ಪರೀಕ್ಷೆಯಲ್ಲಿ ಧೈರ್ಯ ತುಂಬುವ ಪೂರ್ವ ಸಿದ್ಧತೆಯ ಕಾರ್ಯಾಗಾರವನ್ನು ಕಲಾಕುಂಚದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈಯವರು ನಡೆಸಲಿದ್ದಾರೆ. ಮಕ್ಕಳೊಂದಿಗೆ ಪೋಷಕರು ಆಗಮಿಸಬೇಕಾಗಿ ಸಂಸ್ಥೆಯ ಪದಾಧಿಕಾರಿಗಳು ವಿನಂತಿಸಿದ್ದಾರೆ.

