Saturday, December 14, 2024
Homeಮಂಗಳೂರುನ.28ರಂದು ಲೋಕಾಯುಕ್ತ ಪೊಲೀಸ್ ಮೂಡುಬಿದಿರೆಗೆ

ನ.28ರಂದು ಲೋಕಾಯುಕ್ತ ಪೊಲೀಸ್ ಮೂಡುಬಿದಿರೆಗೆ

ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಮೂಡುಬಿದಿರೆಗೆ ಭೇಟಿ ನೀಡಲಿದ್ದಾರೆ. ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ. ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಕೋರಲಾಗಿದೆ.

28.11.2024 ರಂದು ಬೆಳಿಗ್ಗೆ 11-00 ಗಂಟೆಯಿಂದ ಮೂಡಬಿದ್ರೆ ತಾಲೂಕು ಕಛೇರಿ, ಮೂಡಬಿದ್ರೆ ಇಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ ಯನ್ನು ಆಯೋಜಿಸಲಾಗಿದೆ.

ಇದಲ್ಲದೇ ಉಳಿದ ದಿನಗಳಲ್ಲೂ ಕಛೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ. ದೂರವಾಣಿ ಅಥವಾ ಮೂಲಕವೂ ಸಂಪರ್ಕಿಸಬಹುದಾಗಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯುವಂತೆ ಕೋರಲಾಗಿದೆ.

ಅರ್ಜಿದಾರರು ನಮೂನೆ 1 & II ರಲ್ಲಿ ಭರ್ತಿ ಮಾಡಿ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಈ ಕಛೇರಿಗೆ ಅಥವಾ ನೇರವಾಗಿ ಮಾನ್ಯ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ/ಬಿ.ಆರ್. ಅಂಬೇಡ್ಕರ್ ವಿಧಿ, ಬೆಂಗಳೂರು-560001 ರವರಿಗೆ ಸಲ್ಲಿಸುವುದು.

ಪೊಲೀಸ್ ಅಧೀಕ್ಷಕರು ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗ, ಮಂಗಳೂರು.

RELATED ARTICLES
- Advertisment -
Google search engine

Most Popular