Thursday, July 25, 2024
Homeಧಾರ್ಮಿಕಶ್ರೀ ಸಾಯಿ ಈಶ್ವರ್ ಗುರೂಜಿಯವರ ಮಹಾ ಸಂಕಲ್ಪದಂತೆ 108 ದಿನ 108 ಕ್ಷೇತ್ರ ಪ್ರದಕ್ಷಿಣೆಯ ಹನ್ನೆರಡನೇ...

ಶ್ರೀ ಸಾಯಿ ಈಶ್ವರ್ ಗುರೂಜಿಯವರ ಮಹಾ ಸಂಕಲ್ಪದಂತೆ 108 ದಿನ 108 ಕ್ಷೇತ್ರ ಪ್ರದಕ್ಷಿಣೆಯ ಹನ್ನೆರಡನೇ ದಿನದ

ಶಂಕರಪುರ ದ್ವಾರಕಾಮಾಯಿ ಮಠದ ಶ್ರೀ ಸಾಯಿ ಈಶ್ವರ್ ಗುರೂಜಿಯವರ ಮಹಾ ಸಂಕಲ್ಪದಂತೆ 108 ದಿನ 108 ಕ್ಷೇತ್ರ ಪ್ರದಕ್ಷಿಣೆಯ ಹನ್ನೆರಡನೇ ದಿನದ ಪ್ರದಕ್ಷಿಣೆಗೆ ದಿನಾಂಕ: 25-06-2024 ಮಂಗಳವಾರ ಉದ್ಯಾವರ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದ ಅರ್ಚಕರಾದ ರಂಗನಾಥ ಭಟ್, ಗುರುರಾಜ ಭಟ್ ರವರಿಗೆ ಧರ್ಮ, ರಾಷ್ಟ್ರ, ಯೋಧರು ಹಾಗೂ ಅವರ ಕುಟುಂಬದ ರಕ್ಷಣೆ , ಗೋರಕ್ಷಣೆ, ಸನಾತನ ಧರ್ಮ ರಕ್ಷಣೆ ಮತ್ತು ಹಿಂದೂಗಳು ಮತಾಂತರವಾಗುವುದನ್ನು ತಡೆಯುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರದಲ್ಲಿ ನಿತ್ಯ ಪೂಜೆಯ ಬಳಿಕ ವಿಶೇಷ ಪ್ರಾರ್ಥನೆ ಮಾಡುವಂತೆ ಮನವಿ ಸಲ್ಲಿಸಿ ಬಿಲ್ವಾ ಪತ್ರೆಯ ಗಿಡ ನೀಡಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಸಿದ್ಧಿ ವಿನಾಯಕ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಸಂತೋಷ್ ಕುಮಾರ್ , ಸುರೇಶ್ ಆಚಾರ್ಯ, ಯತಿರಾಜ್ ಶೆಟ್ಟಿ , ವೀಣಾ .ಎಸ್.ಶೆಟ್ಟಿ, ಡಾ.ನಿಶೀತ್ ಶೆಟ್ಟಿ, ಸತೀಶ್ ಪೂಜಾರಿ ಉದ್ಯಾವರ , ನೀತಾ ಪ್ರಭು, ವಿಜಯ ಕುಂದರ್, ಭವಾನಿ, ಸತೀಶ್ ದೇವಾಡಿಗ, ಶಶಾಂಕ್ ಹಾಗೂ ಅಭಿಮಾನಿ ಭಕ್ತರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular