ತೀರ್ಥಹಳ್ಳಿ: ತಾಲೂಕಿನಲ್ಲಿ ಇಂದು ಭಾರೀ ಸಿಡಿಲು ಸಹಿತ ಸಾಧಾರಣ ಮಳೆಯಾಗಿದೆ. ಈ ವೇಳೆ ಸಿಡಿಲು ಬಡಿದು ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದಾರೆ. ತಾಲೂಕಿನ ಬಾಳೆಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ನಾಗೇಂದ್ರ ಬಿನ್ ಸಿನ್ ಪೂಜಾರಿ ಮೃತ ದುರ್ದೈವಿ. ಗುಜುಗೊಳ್ಳಿ ಕೇಶವ ಕಿಣಿಯವರ ತೋಟದಲ್ಲಿ ಇವರು ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದಿದೆ. ತೋಟದಲ್ಲಿ ಕಳೆ ಕೀಳುವ ವೇಳೆ ಸಿಡಿಲು ಬಡಿದಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಆಗುಂಬೆ ಪೊಲೀಸರು ಆಗಮಿಸಿದ್ದಾರೆ.