Tuesday, May 13, 2025
Homeರಾಜ್ಯಆನ್‌ಲೈನ್‌ ಗೇಮಿಂಗ್‌ಗೆ ವಿದ್ಯಾರ್ಥಿ ಬಲಿ | ನೇಣಿಗೆ ಶರಣಾದ ಇಂಜಿನಿಯರಿಂಗ್‌ ವಿದ್ಯಾರ್ಥಿ

ಆನ್‌ಲೈನ್‌ ಗೇಮಿಂಗ್‌ಗೆ ವಿದ್ಯಾರ್ಥಿ ಬಲಿ | ನೇಣಿಗೆ ಶರಣಾದ ಇಂಜಿನಿಯರಿಂಗ್‌ ವಿದ್ಯಾರ್ಥಿ

ಹುಬ್ಬಳ್ಳಿ: ಆನ್‌ಲೈನ್‌ ಗೇಮಿಂಗ್‌ ವ್ಯಾಮೋಹಕ್ಕೆ ವಿದ್ಯಾರ್ಥಿಯೊಬ್ಬ ಬಲಿಯಾದ ಘಟನೆ ಹುಬ್ಬಳ್ಳಿಯ ಶಿರಡಿ ನಗರದಲ್ಲಿ ನಡೆದಿದೆ. ವಸತಿ ನಿಲಯದಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಕೇಶ್‌ ಶ್ರೀಶೈಲ್‌ ಜಂಬಲದಿನ್ನಿ (21) ಮೃತ ದುರ್ದೈವಿ.
ಬಿವಿಬಿ ಕಾಲೇಜಿನಲ್ಲಿ ಬಿಇ 6ನೇ ಸೆಮಿಸ್ಟರ್‌ನಲ್ಲಿ ಅಧ್ಯಯನ ನಡೆಸುತ್ತಿದ್ದ ರಾಕೇಶ್‌ ಶಿರಡಿ ನಗರದಲ್ಲಿರುವ ವಸತಿ ನಿಲಯದಲ್ಲಿದ್ದ.
ರಾಕೇಶ್‌ ಆನ್‌ಲೈನ್‌ ಗೇಮ್‌ನಲ್ಲಿ ಹಣ ಕಳೆದುಕೊಂಡಿದ್ದ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ವಸತಿ ನಿಲಯಕ್ಕೆ ಹಿರಿಯ ಅಧಿಕಾರಿಗಳು ಆಗಮಿಸಿ ತನಿಖೆ ನಡೆಸಿದ್ದಾರೆ. ಆತ್ಮಹತ್ಯೆಯ ವಿಷಯ ಗಮನಕ್ಕೆ ಬರುತ್ತಿದ್ದಂತೆಯೇ ಸಿಬ್ಬಂದಿ ಆತನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಆಸ್ಪತ್ರೆ ತಲುಪುವಷ್ಟರಲ್ಲಿ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ದೃಢಪಡಿಸಿದ್ದಾರೆ.

RELATED ARTICLES
- Advertisment -
Google search engine

Most Popular