ಬಂಟ್ವಾಳ : ಸಂಸ್ಕಾರ ಇದ್ದರೆ ಮಾತ್ರ ಜೀವನದ ಯೋಗ್ಯತೆ ಪಡೆಯಲು ಸಾಧ್ಯ .ಈ ನಿಟ್ಟಿನಲ್ಲಿ ಮಕ್ಕಳಿಗೆ ಸಂಸ್ಕಾರ ಸಂಸ್ಕೃತಿ ಕಲಿಸಲು ಭಜನೆ ಸುಲಭ ಮಾರ್ಗವಾಗಿದೆ.ಜೊತೆಗೆ ಏಕಾಗ್ರತೆಗೆ, ನೆನಪಿನ ಶಕ್ತಿ ವೃದ್ಧಿಸಲು ಭಜನೆ ಸಹಕಾರಿಯಾಗಿದೆ ಎಂದು ಜಿಲ್ಲಾ ರೋಟರಿ ಕ್ಲಬ್ ಮಾಜಿ ಗವರ್ನರ್ ಬಂಟ್ವಾಳ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಪ್ರಕಾಶ್ ಕಾರಂತ್ ಹೇಳಿದರು.
ಅವರು ರವಿವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್( ರಿ.) ಬಂಟ್ವಾಳ ಇದರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ತುಂಬೆ ವಲಯ ವತಿಯಿಂದ ಶ್ರೀ ಕೋದಂಡರಾಮ ಭಜನಾ ಮಂಡಳಿ ಅಂತರ ರಾಮನಗರ ನರಿಕೊಂಬು ಇದರ ಸಹಯೋಗದೊಂದಿಗೆ ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ಅಂತರ ರಾಮನಗರ ಶ್ರೀ ಕೋದಂಡರಾಮ ಭಜನಾ ಮಂಡಳಿ ಸಭಾಂಗಣದಲ್ಲಿ ಒಂದು ವಾರ ನಡೆದ ಭಜನಾ ತರಬೇತಿ ಶಿಬಿರದ ಸಮಾರೋಪ ಕಾರ್ಯಕ್ರಮವನ್ನು ಉದ್ದೇಶಿಸಿಸಿ ಮಾತಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಗ್ರಜ ಬಿಲ್ಡರ್ಸ್ ಮಾಲಕ ಜಿಲ್ಲಾ ಬಿಜೆಪಿ ಕಾರ್ಯಕಾರಿ ಸಮಿತಿಯ ಸದಸ್ಯರಾದ ಸಂದೇಶ್ ಕುಮಾರ್ ಶೆಟ್ಟಿ ಅರೆಬೆಟ್ಟು ವಹಿಸಿದ್ದರು.
ಸಭಾ ಕಾರ್ಯಕ್ರಮದ ಮೊದಲು ಮಕ್ಕಳು ತಾವು ಒಂದು ವಾರದಲ್ಲಿ ಕಲಿತ ಕುಣಿತ ಭಜನೆಯನ್ನು ಪ್ರದರ್ಶಿಸಿದರು.

ಈ ಸಂದರ್ಭದಲ್ಲಿ ಭಜನೆ ತರೆಬೆತು ದಾರರಾದ ಸಂದೇಶ್, ಗಗನ್, ಆಕಾಶ್, ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದ ವೇದಿಕೆಯಲ್ಲಿ ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಕುಮಾರ್, ನರಿಕೊಂಬು ಗ್ರಾಮ ಪಂಚಾಯತ್ ಸದಸ್ಯರಾದ ಕಿಶೋರ್ ಶೆಟ್ಟಿ ಅಂತರ, ಪ್ರಗತಿಪಾರ ಕೃಷಿಕ ಪ್ರೇಮನಾಥ್ ಶೆಟ್ಟಿ ಅಂತರ, ಕೋದಂಡರಮ ಭಜನಾ ಮಂದಿರ ಅಧ್ಯಕ್ಷ ಚಂದ್ರಶೇಖರ ಗೌಡ, ಮಹಿಳಾ ಮಂಡಳಿ ಅಧ್ಯಕ್ಷ ಭಾರತಿ, ಗ್ರಾಮಭಿವೃದ್ಧಿ ಯೋಜನೆ ದಕ್ಷಿಣ ಕನ್ನಡ ಜಿಲ್ಲೆ ಒಂದರ ಎಮ್ ಐ ಎಸ್ ಯೋಜನಾಧಿಕಾರಿ ಪ್ರೇಮನಾಥ್ ಎಸ್ ಎಚ್,ಜಿಲ್ಲಾ ಭಜನಾ ಪರಿಷತ್ ಸಮವ್ವಯಾಧಿಕಾರಿ ಸಂತೋಷ್ ಅಳಿಯೂರು, ಭಜನಾ ಮಂಡಳಿ ಸದಸ್ಯ ಗಣೇಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಶಿಬಿರಾರ್ಥಿ ಮಕ್ಕಳ ಪೋಷಕರು, ಭಜನಾ ಮಂಡಳಿ ಸದಸ್ಯರು, ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟ ಪದಾಧಿಕಾರಿಗಳು,ಸದಸ್ಯರುಗಳು ಭಾಗವಹಿಸಿದ್ದರು.
ಗ್ರಾಮಾಭಿವೃದ್ಧಿ ಯೋಜನೆ ನರಿಕೊಂಬು ಎ ಒಕ್ಕೂಟ ಅಧ್ಯಕ್ಷ ಕೃಷ್ಣಪ್ಪ ಸಪಲ್ಯ ಸ್ವಾಗತಿಸಿ, ತುಂಬೆ ವಲಯ ಮೇಲ್ವಿಚಾರಕಿ ಮಮತಾ ಸಂತೋಷ್ ಕಾರ್ಯಕ್ರಮ ನೀರೂಪಿಸಿದರು. ಸೇವಾಪ್ರತಿನಿದಿಗಳಾದ ಕುಸುಮಾವತಿ ಹಾಗೂ ಪ್ರತಿಭಾ ಸಹಕರಿಸಿದರು.