ಗೀತಾ ಪಠಣಕ್ಕೆ ಸಾರ್ವಜನಿಕರಿಗೆ ಮುಕ್ತ ಅವಕಾಶ

0
18


ಉಡುಪಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೃಷ್ಣ ಮಠಕ್ಕೆ ಭೇಟಿ ನೀಡಿ, ನಂತರ ಲಕ್ಷಕಂಠ ಗೀತಾ ಪಠಣ ಮಹಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಸಾರ್ವಜನಿಕರಿಗೆ ಮುಕ್ತ ಅವಕಾಶವಿದೆ. ಗಣ್ಯರಿಗೆ ಮಾತ್ರ ಪಾಸ್​ ಅಗತ್ಯವಾಗಿದೆ ಎಂದು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಧ್ಯಾಹ್ನ 12 ಗಂಟೆಗೆ ಮೋದಿ ಅವರಿಗೆ ಸಾಂಪ್ರದಾಯಿಕ ಸ್ವಾಗತ ಸಲ್ಲಿಸಲಾಗುತ್ತದೆ. ನಂತರ ಅವರು ಕನಕ ಗುಡಿಯಲ್ಲಿ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ಕನಕನ ಕಿಂಡಿಯಲ್ಲಿ ದೇವರ ದರ್ಶನ ಮಾಡಿ, ಮಧ್ವ ಸರೋವರದಲ್ಲಿ ಪಾದಪ್ರಾಲನೆ ಮಾಡಿಕೊಂಡು ಮಠದೊಳಗೆ ಆಗಮಿಸಲಿದ್ದಾರೆ. ನೂತನ ಸುವರ್ಣ ತೀರ್ಥ ಮಂಟಪ ಉದ್ಘಾಟಿಸಲಿದ್ದಾರೆ. ಚಂದ್ರಶಾಲೆಯಲ್ಲಿ ವಿವಿಧ ಮಠಾಧೀಶರ ಆಶೀರ್ವಾದ ಪಡೆಯಲಿದ್ದು, ಕೃಷ್ಣ ಪ್ರಸಾದ ಹಾಗೂ ಭಗವದ್ಗೀತೆ ಲೇಖನ ದೀೆ ಸ್ವೀಕರಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಗಣ್ಯರ ಉಪಸ್ಥಿತಿ
ಸಭಾ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ, ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ, ರಾಜ್ಯ ಸಚಿವ ಭೈರತಿ ಸುರೇಶ್​, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಯಶ್ಪಾಲ್​ ಸುವರ್ಣ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ದಿವಾನ್​ ನಾಗರಾಜ ಆಚಾರ್ಯ, ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here