ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಅಖಾಲ್ ಪ್ರದೇಶದಲ್ಲಿ ಸೇನೆಯಿಂದ ‘ಆಪರೇಷನ್ ಅಖಾಲ್’ ಕಾರ್ಯಾಚರಣೆ ಆರಂಭಗೊಂಡಿದ್ದು, ಒಬ್ಬ ಉಗ್ರನನ್ನು ಹೊಡೆದುರುಳಿಸಲಾಗಿದೆ.
ಸದ್ಯ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ತಿಳಿದು ಬಂದಿದ್ದು, ಅಡಗಿ ಕುಳಿತಿರುವ ಉಗ್ರರಿಗಾಗಿ ಸೇನೆ ಶೋಧ ಕಾರ್ಯ ನಡೆಸುತ್ತಿದೆ. ಇದುವರೆಗೆ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ಶನಿವಾರ ತಿಳಿಸಿದೆ.
ಭಾರತೀಯ ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ಗುಂಪು (ಎಸ್‌ಒಜಿ) ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಜಂಟಿ ಕಾರ್ಯಾಚರಣೆಯನ್ನು ನಡೆಸುತ್ತಿವೆ. ‘ಕುಲ್ಗಮ್‌ನಲ್ಲಿ ಆಪರೇಷನ್ ಅಕಾಲ್ ನಡೆಯುತ್ತಿದೆ. ಇಲ್ಲಿಯವರೆಗೆ ಒಬ್ಬ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದಾರೆ. ಕಾರ್ಯಾಚರಣೆ ಮುಂದುವರೆದಿದೆ’ ಎಂದು ಚಿನಾರ್ ಕಾರ್ಪ್ಸ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.